ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಭೋದಕರಾಗಿ ಕೆಲಸ ಮಾಡಲು ಬಯಸುವವರು ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಬೆಂಗಳೂರು ವಿಶ್ವವಿದ್ಯಾಲಯದ ನೇಮಕಾತಿ ನಿಯಮಗಳ ಪ್ರಕಾರ  ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೀಗಾಗಿ ಆಸಕ್ತರು ಅರ್ಜಿ ಸಲ್ಲಿಸುವಂತೆ ಬೆಂಗಳೂರು ವಿವಿ ಮನವಿ ಮಾಡಿದೆ.