ಬೆಂಗಳೂರು ಯೂನಿವರ್ಸಿಟಿಯಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ತಂತ್ರಜ್ಞಾನ

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022 ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಅಧಿಕೃತ ವೆಬ್‌ತಾಣ  bangaloreuniversity.ac.in  ಗೆ ಭೇಟಿ ನೀಡಲು ಕೋರಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನದನ್ನು ತಿಳಿಯಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಪೂರ್ಣ ಅಧಿಸೂಚನೆಯನ್ನು ಓದಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದೆ.

ಶೈಕ್ಷಣಿಕ ವಿದ್ಯಾಭ್ಯಾಸಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸ್ನಾತಕೋತ್ತರ ವಿದ್ಯಾರ್ಹತೆ ಪಡೆದಿರಬೇಕು.

ಅರ್ಜಿ ಶುಲ್ಕಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿಲ್ಲ.

ಆಯ್ಕೆ ಪ್ರಕ್ರಿಯೆಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸಫ್ಯಾಕಲ್ಟೀಸ್ ಆರ್ಟ್ಸ್ ಅಡಿಯಲ್ಲಿ ಸ್ನಾತಕೋತ್ತರ ವಿಭಾಗಗಳ ಆಯಾ ಪ್ರಾಂಶುಪಾಲರು/ನಿರ್ದೇಶಕರು/ಅಧ್ಯಕ್ಷರು/ಸಂಯೋಜಕರು, ವಿಜ್ಞಾನ, ವಾಣಿಜ್ಯ, ಶಿಕ್ಷಣ ಮತ್ತು ದೈಹಿಕ ಶಿಕ್ಷಣ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನ ಭಾರತಿ ಕ್ಯಾಂಪಸ್,
ಬೆಂಗಳೂರು – 560056 (ನೀವು ಯಾವ ವಿಭಾಗಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಿ ಆ ವಿಭಾಗವನ್ನು ಸ್ಪಷ್ಟವಾಗಿ ನಮೂದಿಸಬೇಕು)

ವೇತನ ವಿವರಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ.