ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ. ಒಂದೊಂದು ಹನಿ ನೀರಿಗೂ ಹಾಹಾಕಾರ ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯುಎಸ್ಎಸ್ಬಿ, ನೀರಿನ ದುರ್ಬಳಕೆ ತಡೆಗಟ್ಟಲು ಮುಂದಾಗಿದೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದ BWSSB, ಮನೋರಂಜಕವಾಗಿ ಅಥವಾ ಆಕರ್ಷಕ ವ್ಯವಸ್ಥೆಗೆ ಅಥವಾ ವಾಹನ ತೊಳೆಯಲು ಇತ್ಯಾದಿಗಳಿಗೆ ಬಳಕೆ ಮಾಡಿದರೆ ಐದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ನೀರು ವ್ಯರ್ಥವಾಗುವುದನ್ನು ತಡೆಗಟ್ಟಲು ಮುಂದಾದ BWSSB, ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದೆ. ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆಗೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಥಿಯೇಟರ್,
ಮಾಲುಗಳಲ್ಲಿ ಬಳಸಿದರೆ 5 ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.ಜಲಮಂಡಳಿ ಕಾಯ್ದೆ 194 ಕಲಂ 109 ರಂತೆ 5 ಸಾವಿರ ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಉಲ್ಲಂಘನೆ ಮರುಕಳಿಸಿದರೆ 5 ಸಾವಿರ ದಂಡದ ಜೊತೆಗೆ ದಿನಪ್ರತಿ 500 ರೂಪಾಯಿ ಹೆಚ್ಚುವರಿ ದಂಡ ವಸೂಲಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.