ಸುಳ್ಳು ಅಥವಾ ದಾರಿತಪ್ಪಿಸುವ ಸುದ್ದಿಗಳನ್ನು ಪ್ರಕಟಿಸಿದರೆ ಅಂತಹ ಮಾಧ್ಯಮಗಳನ್ನು ಮುಚ್ಚುವುದಾಗಿ ಬಾಂಗ್ಲಾದೇಶದ ನೂತನ ಸರ್ಕಾರ ಎಚ್ಚರಿಕೆ ನೀಡಿದೆ.
ಮಧ್ಯಂತರ ಸರ್ಕಾರದ ಗೃಹ ವ್ಯವಹಾರಗಳ ಸಲಹೆಗಾರ ಬ್ರಿಗೇಡಿಯರ್ ಜನರಲ್ (ನಿವೃತ್ತ) ಎಂ ಸಖಾವತ್ ಹೊಸೈನ್ ಅವರು ಬಾಂಗ್ಲಾದೇಶ ಮಾಧ್ಯಮವು ಸತ್ಯವನ್ನು ಎತ್ತಿಹಿಡಿಯಲು ವಿಫಲವಾಗಿದೆ. ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯದಿದ್ದಾಗ ರಾಷ್ಟ್ರವು ತತ್ತರಿಸುತ್ತದೆ ಎಂದಿದ್ದಾರೆ.
ಸುಳ್ಳು ಅಥವಾ ದಾರಿತಪ್ಪಿಸುವ ಸುದ್ದಿಗಳನ್ನು ಪ್ರಕಟಿಸಿದರೆ ಅಥವಾ ಪ್ರಸಾರ ಮಾಡಿದರೆ ಅವುಗಳನ್ನು ಮುಚ್ಚುತ್ತೇವೆ. ಟಾಕ್ ಶೋಗಳಲ್ಲಿ ವಸ್ತುನಿಷ್ಠ ಚರ್ಚೆಯ ಕೊರತೆಯಿದೆ ಮತ್ತು ನಿಖರವಾದ ಮಾಹಿತಿಯನ್ನು ನೀಡಲು ಮಾಧ್ಯಮಗಳು ವಿಫಲವಾಗಿವೆ ಎಂದು ಆರೋಪಿಸಿದರು.
ಮೀಸಲಾತಿ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದಾರೆ. ನೂತನ ಸರ್ಕಾರ ರಚನೆಯಾಗುವವರೆಗೂ ಮಧ್ಯಂತರ ಸರ್ಕಾರ ಅಧಿಕಾರದಲ್ಲಿ ಇರಲಿದೆ. ಬ್ಯಾಂಕರ್, ನೊಬೆಲ್ ಬಹುಮಾನ ವಿಜೇತ ಮೊಹಮ್ಮದ್ ಯೂನಸ್ ಅವರು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.