ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ಇದೀಗ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿದ್ದ ಯತ್ನಾಳ್..!
ಯಾವಾಗ ರಾಜ್ಯ ಸರ್ಕಾರ, ಸಿಬಿಐ ತನಿಖೆಯಿಂದ ಡಿ.ಕೆ.ಶಿವಕುಮಾರ್ಗೆ ಮುಕ್ತಿ ನೀಡಲು ಕ್ರಮ ತೆಗೆದುಕೊಂಡಿತ್ತೋ, ಅಂದೇ ಯತ್ನಾಳ ಖಂಡಿಸಿದ್ದರು. ಅಲ್ಲದೇ ಸರ್ಕಾರದ ನಿರ್ಧಾರವನ್ನು ನಾನು ಚಾಲೆಂಜ್ ಮಾಡುತ್ತೇನೆ ಎಂದಿದ್ದರು. ಅದರಂತೆ ಇದೀಗ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.