ಬೆಂಗಳೂರು:- ಡಿಸೆಂಬರ್ 9 ರಿಂದ 13ರ ತನಕ ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ನಡೆಯಲಿದೆ. ಬಸವನಗುಡಿ ಶ್ರೀ ದೊಡ್ಡಬಸವಣ್ಣ ಮತ್ತು ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಕಡೆಲೆಕಾಯಿ ಪರಿಷೆ ಜಾತ್ರೆಯು ನಡೆಯಲಿದ್ದು, ಸುಗಮ ಸಂಚಾರಕ್ಕಾಗಿ ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ಸಂಚಾರ ಪೊಲೀಸರು ಘೋಷಿಸಿದ್ದಾರೆ.
ಈ ಜಾತ್ರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳ ಲಕ್ಷಾಂತರ ಭಕ್ತಾಧಿಗಳು ಆಗಮಿಸಲಿದ್ದು, ಈ ಭಾಗದಲ್ಲಿ ಸಂಚಾರ ದಟ್ಟಣೆ ಏರ್ಪಡುವುದು ಸಹಜ. ಈ ನಿಟ್ಟಿನಲ್ಲಿ ಬೆಂಗಳೂರು ನಗರದ ಬಸವನಗುಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಕೆಲವು ಕ್ರಮಗಳನ್ನು ಕೈಗೊಂಡಿದೆ.
ಸಾರ್ವಜನಿಕರು, ಗಣ್ಯರು, ಭಕ್ತಾಧಿಗಳು, ವ್ಯಾಪಾರಿಗಳ ಹಿತದೃಷ್ಟಿಯಿಂದ ಮತ್ತು ಪಾದಚಾರಿಗಳ ಸುರಕ್ಷಿತ ಓಡಾಟ, ವಾಹನಗಳ ಸುಗಮ ಸಂಚಾರ ಮತ್ತು ವಾಹನಗಳ ನಿಲುಗಡೆಗೆ ಅನುಕೂಲ ಕಲ್ಪಿಸಿಕೊಡಲು ಬುಲ್ಟೆಂಪಲ್ ರಸ್ತೆಯಲ್ಲಿ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ಬುಲ್ ಟೆಂಪಲ್ ಸಂಚಾರ ಮಾರ್ಗಗಳಲ್ಲಿ ಬದಲಾವಣೆ,
1. ಲಾಲ್ಬಾಗ್ ವೆಸ್ಟ್ಗೇಟ್ ಕಡೆಯಿಂದ ವಾಣಿವಿಲಾಸ್ ರಸ್ತೆಯ ಮುಖಾಂತರ ಮತ್ತು 5ನೇ ಮುಖ್ಯರಸ್ತೆ ಚಾಮರಾಜ ಪೇಟೆ ಹಾಗೂ ಗಾಂಧಿಬಜಾರ್ ಮುಖ್ಯ ರಸ್ತೆಯಿಂದ ಬುಲ್ಟೆಂಪಲ್ ಮುಖಾಂತರ ಹನುಮಂತ ನಗರದ ಕಡೆಗೆ ಸಂಚರಿಸುವ ವಾಹನಗಳು ಬುಲ್ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು, ಹಯವದನರಾವ್ ರಸ್ತೆಯಲ್ಲಿ ಸಾಗಿ, ಗವಿಪುರಂ 3ನೇ ಅಡ್ಡರಸ್ತೆಯ ಮೂಲಕ ಮುಂದೆ ಸಾಗಿ ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.
2. ಆರ್.ವಿ. ಟೀಚರ್ ಕಾಲೇಜ್ ಜಂಕ್ಷನ್ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆಯಲ್ಲಿ ಬ್ಯೂಗಲ್ ರಾಕ್ ರಸ್ತೆ ಮೂಲಕ ಹನುಮಂತನಗರ ಕಡೆಗೆ ಹೋಗುವ ವಾಹನಗಳು ಟ್ಯಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ-ಬ್ಯೂಗಲ್ರಾಕ್ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆದು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್ ಅಲ್ಲಿಂದ ಹಯವಧನರಾವ್ ರಸ್ತೆಯಲ್ಲಿ ಗವಿಪುರಂ ಎಕ್ಸ್ಟೆಂಕ್ಷನ್ 3ನೇ ಅಡ್ಡರಸ್ತೆಯಲ್ಲಿ ಮುಂದೆ ಸಾಗಿ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರಕ್ಕೆ ಹೋಗಬೇಕು.
3. ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ ಎನ್.ಆರ್. ಬುಲ್ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಅಲ್ಲಿಂದ ಮುಂದೆ ಕತ್ರಿಗುಪ್ಪೆ ರಸ್ತೆಯ ಜಂಕ್ಷನ್ನಲ್ಲಿ ಬಲ ತಿರುವು ಪಡೆದು 3ನೇ ಮುಖ್ಯರಸ್ತೆ ಮೂಲಕ ನಾರಾಯಣಸ್ವಾಮಿ ಸರ್ಕಲ್ನಲ್ಲಿ ಕೆ.ಜಿ. ನಗರ ಮುಖ್ಯರಸ್ತೆ ಅಥವಾ ಹಯವಧನರಾವ್ ರಸ್ತೆಯಲ್ಲಿ ಸಾಗಿ ರಾಮಕೃಷ್ಣ ಆಶ್ರಮ ಜಂಕ್ಷನ್ ಮೂಲಕ ಚಾಮರಾಜಪೇಟೆ ಕಡೆಗೆ ಸಾಗಬಹುದಾಗಿದೆ.
ಕಡಲೆಕಾಯಿ ಪರಿಷೆಗೆ ಭೇಟಿ ನೀಡುವ ಸಾರ್ವಜನಿಕರು ಮತ್ತು ಭಕ್ತಾಧಿಗಳ ವಾಹನಗಳ ನಿಲುಗಡೆಗಾಗಿ, ಈ ಕೆಳಕಂಡ ಸಾರ್ವಜನಿಕ ರಸ್ತೆಗಳಲ್ಲಿರುವ ಆಟದ ಮೈದಾನಗಳನ್ನು ಬಳಸಿಕೊಳ್ಳಬಹುದಾಗಿದೆ.
1. ಎ.ಪಿ.ಎಸ್.ಕಾಲೇಜ್ ಆಟದ ಮೈದಾನ, ಎನ್.ಆರ್. ಕಾಲೋನಿ.
2. ಹಯವಧನರಾವ್ ರಸ್ತೆಯಲ್ಲಿರುವ ಕೊಹಿನೂರು ಆಟದ ಮೈದಾನ, ರಾಮಕೃಷ್ಣ ಆಶ್ರಮ ಜಂಕ್ಷನ್ ಸಮೀಪ.