ಚಾಮರಾಜನಗರ: ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಪ್ರತಿಷ್ಠೆ ಪಣಕ್ಕಿಡಲು ಹೊರಟಿರುವ ಮಾಜಿ ಸಚಿವ ವಿ.ಸೋಮಣ್ಣ (V.Somanna) ಅವರನ್ನು ಕಟ್ಟಿ ಹಾಕಲು ಕಾಂಗ್ರೆಸ್ (Congress) ರಣತಂತ್ರ ಹೆಣೆಯುತ್ತಿದೆ. ವರುಣಾದಲ್ಲಿ ಹೆಚ್ಚು ಕೇಂದ್ರೀಕರಿಸದಂತೆ ಚಾಮರಾಜನಗರದಲ್ಲಿ (Chamarajanagara) ಕಟ್ಟಿ ಹಾಕಲು ರಣವ್ಯೂಹ ರಚಿಸಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ಸೋಮಣ್ಣಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಾಗೆ ಸೋಮಣ್ಣ ಹೋಗದಂತೆ ಚಾಮರಾಜನಗರದಲ್ಲೇ ಕಟ್ಟಿ ಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಫೋಟವಾಗಿದೆ. ಟಿಕೆಟ್ ವಂಚಿತ ನಾಗಶ್ರೀ ಪ್ರತಾಪ್ ಅವರ ಬೆಂಬಲಿಗರು ಈಗಾಗಲೇ ಕೆರಳಿ ಕೆಂಡವಾಗಿದ್ದು, ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಕೆಆರ್ಐಡಿಎಲ್ ಅಧ್ಯಕ್ಷ ರುದ್ರೇಶ್ ಬಹಿರಂಗವಾಗಿಯೇ ಸೋಮಣ್ಣ ವಿರುದ್ಧ ಹರಿಹಾಯ್ದಿದ್ದು, ಗಂಭೀರ ಆರೋಪಗಳನ್ನು ಮಾಡಿದ್ದಾರೆ.