ಚಿಕ್ಕಮಗಳೂರು:- ದೊಡ್ಡ ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗುತ್ತಿದ್ದ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ಆರಂಭಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಕುಡಿದು ವಾಹನ ಚಾಲನೆ ಮಾಡುತ್ತಿರುವ ಪರಿಣಾಮ ಅಪಘಾತಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ.
ಹೀಗಾಗಿ ಮೂಡಿಗೆರೆ ಪೊಲೀಸರು ದಿಟ್ಟ ಕ್ರಮವನ್ನು ಕೈಗೊಂಡಿದ್ದು ಸ್ಪೆಷಲ್ ಡ್ರೈವ್ ಮೂಲಕ ಡ್ರಿಂಕ್ ಅಂಡ್ ಡ್ರೈವ್ ಮಾಡುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರಶಂಸೆ ವ್ಯರ್ಥವಾಗುತ್ತಿದೆ