ಕಳೆದ 14 ದಿನದಲ್ಲಿ ಬಿಯರ್ ಮಾರಾಟದ ಲೆಕ್ಕಚಾರ ತಲೆಕೆಳಗಾಗಿದೆ. ಕಳೆದ ವರ್ಷ ಫೆಬ್ರವರಿ ಒಂದರಿಂದ 14ರ ವರೆಗೆ 14.35 ಲಕ್ಷ ಕೇಸ್ ಬಿಯರ್ ಸೇಲ್ ಆಗಿತ್ತು. ಆದರೆ ಈ ವರ್ಷ ಕೇವಲ 13.34 ಲಕ್ಷ ಕೇಸ್ ಬಿಯರ್ ಮಾರಾಟವಾಗಿದೆ. ದರ ಏರಿಕೆಯಿಂದ ಬರೊಬ್ಬರಿ 1 ಲಕ್ಷ ಕೇಸ್ ಮಾರಾಟ ಕುಸಿತವಾಗಿದೆ.
ಜನವರಿಯಲ್ಲಿ 14 ದಿನಕ್ಕೆ 17 ಲಕ್ಷ ಕೇಸ್ ಬಿಯರ್ ಮಾರಾಟವಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಜನವರಿಯಲ್ಲಿ 15 ಪರ್ಸೆಂಟ್ ಏರಿಕೆಯಾಗಿತ್ತು. ಈ ತಿಂಗಳು ಕೂಡ ಭರ್ಜರಿ ಮಾರಾಟದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಮದ್ಯಪ್ರಿಯರು ಶಾಕ್ ನೀಡಿದ್ದಾರೆ. ಆದರೆ ಕಳೆದ 14 ದಿನದಲ್ಲಿ ಮಾರಾಟ ಕಮ್ಮಿಯಾದ್ರೂ ಆದಾಯದಲ್ಲಿ ಮಾತ್ರ ಏರಿಕೆ ಆಗಿದೆ. ಕಳೆದ ವರ್ಷ 14 ದಿನದಲ್ಲಿ 1200 ಕೋಟಿ ಆದಾಯ ಬಂದ್ರೆ. ಈ ವರ್ಷ 1400 ಕೋಟಿ ಆದಾಯ ಸಂಗ್ರವಾಗಿ, 200 ಕೋಟಿ ಅಧಿಕವಾಗಿದೆ. ದರ ಏರಿಕೆಯಿಂದ ಮಾತ್ರ ಹೆಚ್ಚುವರಿ ಆದಾಯ ಸಂಗ್ರಹವಾಗಿದೆ ಮಾರಾಟದಿಂದಲ್ಲ ಎಂದು ಬೆಂಗಳೂರು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಕರುಣಾಕರ ಹೆಗಡೆ ತಿಳಿಸಿದ್ದಾರೆ.
ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಬಿಯರ್ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್ ಉತ್ಪಾದನಾ ಕಂಪನಿಗಳು ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ವು. ಮೂರನೇ ಬಾರಿ ಅಂದರೆ ಫೆಬ್ರವರಿ 1 ರಿಂದ ಬಿಯರ್ ಮೇಲಿನ ಅಬಕಾರಿ ಸುಂಕವನ್ನು 10 ರಷ್ಟು ಏರಿಕೆ ಮಾಡಿತ್ತು. ಇದರಿಂದ ಆರೇಳು ತಿಂಗಳ ಅವಧಿಯಲ್ಲಿ ಬಿಯರ್ ಬೆಲೆ ಸುಮಾರು ವಿವಿಧ ಬಾಟೆಲ್ ಮೇಲೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಈ ವರ್ಷ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ₹36 ಸಾವಿರ ಕೋಟಿ ಆದಾಯ ಸಂಗ್ರಹದ ಟಾರ್ಗೆಟ್ ನೀಡಿದೆ.
ಈಗಾಗಲೇ 10 ತಿಂಗಳಿಗೆ ಬರೊಬ್ಬರಿ ₹28,000 ಕೋಟಿ ಆದಾಯ ಸಂಗ್ರಹವಾಗಿದೆ. ಇನ್ನೂ ಎರಡು ತಿಂಗಳಿನಲ್ಲಿ ಟಾರ್ಗೆಟ್ ರೀಚ್ ಆಗಲು 8 ಸಾವಿರಕ್ಕೂ ಅಧಿಕ ಆದಾಯ ಸಂಗ್ರಹವಾಗಬೇಕು. ಆದರೆ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಗೆ ಮಾಡಿದ್ದಕ್ಕೆ ಮದ್ಯಪ್ರಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ. ಮತ್ತು ದರ ಏರಿಕೆ ನಂತರ ಬಿಯರ್ ಸೇವಿಸುವುದನ್ನೆ ನಿಲ್ಲಿಸಿದ್ದೀವಿ ಎಂದು ಮದ್ಯಪ್ರಿಯರೊಬ್ಬರು ತಿಳಿಸಿದರು.