ಬೆಳಗಾವಿ : ಸುವರ್ಣ ವಿಧಾನಸೌಧ ಬಳಿ ಪೆಟ್ರೋಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಬಳಿ ಇರುವ ಸುವರ್ಣ ವಿಧಾನಸೌಧದ ಹೆದ್ದಾರಿಯಲ್ಲಿ ನಡೆದಿದೆ.
ಧಾರವಾಡ ಕಡೆಯಿಂದ ಬೆಳಗಾವಿಯತ್ತ ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿದೆ.
ಟ್ಯಾಂಕರ್ ವಾಹನ ಪಲ್ಟಿಯಾದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್ ಮಾಡಿ ಕ್ರೇನ್ ಮೂಲಕ ಲಾರಿ ಮೇಲೆತ್ತಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
