ಬೆಳಗಾವಿ:-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ, ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ.
ಸಂಕ್ರಾಂತಿ ಹಬ್ಬದ ದಿನವೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.
ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ದಾರಿಯಲ್ಲಿ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟಕ್ಕೆ ಕಾರಿನೊಳಗಿದ್ದವರಿಗೆ ಯಾವ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.