ಬೆಳಗಾವಿ:- ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ಜರುಗಿದೆ.
ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಕೃತ್ಯದ ವಿಡಿಯೋ ಮೊಬೈಲ್ ಫೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದ್ದು, ಸದ್ಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ.
ಸಂಬಂಧ ಇಲ್ಲದವರೆಲ್ಲಾ ಆ ಮಹಿಳೆಯರ ಮನೆಗೆ ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನೆರೆ ಮನೆಯವರು ತಾಯಿ-ಮಗಳನ್ನ ಮನೆ ಬಿಡಿಸಲು ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಲಾಗಿದೆ.