ನೆಲಮಂಗಲ: ಪ್ಯಾಸೆಂಜರ್ ಆಟೋ ಹಾಗೂ ಕಾರು ನಡುವೆ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿರುವ ಘಟನೆ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಬಳಿ ಜರುಗಿದೆ.
ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಅವರುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.