ಬಳ್ಳಾರಿ:- ಮುಡಾ ಬೆನ್ನಲ್ಲೇ ಇದೀಗ ಬುಡಾ ಹಗರಣ ಮುನ್ನೆಲೆಗೆ ಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗ ಮಾಡಿ ಅಕ್ರಮ ಎಸೆಗಿದ್ದಾರೆ ಎಂದು ಸ್ವಪಕ್ಷೀಯ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿರುವುದು ಈಗ ಸಂಚಲನ ಸೃಷ್ಟಿಸಿದೆ.
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್ ಆಂಜನೇಯಲು ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡು ಅಕ್ರಮ ಎಸಗಿದ್ದಾರೆ ಎನ್ನುವ ಗಂಭೀರ ಅರೋಪ ಕೇಳಿ ಬಂದಿದೆ.
ಹೌದು ಲೇಔಟ್ ನಿರ್ಮಾಣ, ಅನುಮತಿ ಮತ್ತು ಹಂಚಿಕೆ ಸಂಬಂಧ ಮಾಚ್ 7 ಮತ್ತು ಜುಲೈ 8ನೇ ತಾರೀಖು ನಡೆದ ಸಭೆಯ ನಡಾವಳಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು, ಆ ಮೂಲಕ ಭ್ರಷ್ಟಾಚಾರ ಮಾಡಲಾಗಿದೆ ಎಂದು ಆರೋಪಿಸಿ ಜೆ ಎಸ್ ಆಂಜಿನೇಯಲು ವಿರುದ್ದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಬುಡಾ ಅಕ್ರಮದ ಬಗ್ಗೆ ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಜೆ ಎಸ್ ಗಣೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ.
ಸರ್ಕಾರ ಕೂಡಲೇ ಎಚ್ಚೆತ್ತು ಶಾಸಕರ ಪತ್ರ ಉಲ್ಲೇಖಿಸಿ ಬುಡಾ ಅಕ್ರಮದ ತನಿಖೆಗೆ ಆದೇಶ ಮಾಡಿದೆ. ತನಿಖೆಗಾಗಿ ಆರು ಜನ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ.