ಬೆಂಗಳೂರು: ಇತ್ತೀಚಿಗೆ ಬಿಬಿಎಂಟಿಸಿ ಬಸ್ ನಿರ್ವಾಹಕನಿಗೆ ಚಾಕು ಇರಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಬಿಎಂಟಿಸಿ ವೋಲ್ವೋ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಲಾಗಿದೆ.
ಗುರುವಾರ ಸಂಜೆ 4:15ರ ಸುಮಾರಿಗೆ ಹೊಸ ರೋಡ್ ಬಸ್ ಸ್ಟ್ಯಾಂಡ್ ಗೆ ಹೋಗುವ ಮುನ್ನಕಂಡಕ್ಟರ್ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಹಿಂದಿನ ಸ್ಟಾಪ್ ನಲ್ಲಿ ಟಿಕೆಟ್ ನೀಡಬೇಕಿತ್ತುಹಾಗಾಗಿ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರಿಗೆ ಟಿಕೆಟ್ ನೀಡಲು ಮುಂದಾಗಿದ್ದ ಕಂಡಕ್ಟರ್ಇದರಿಂದ ಆಕ್ರೋಶಗೊಂಡಿದ್ದ ಪ್ರಯಾಣಿಕಹೊಸ ರೋಡ್ ಬಸ್ ಸ್ಟಾಪ್ ನಲ್ಲಿ ಇಳಿದು ದಾಂದಲೆ ಸ್ಕ್ರೂಡ್ರೈವರ್ ತೋರಿಸಿ ಚುಚ್ಚಿತ್ತಿನಿ ನಿಮ್ಮಬ್ಬರಿಗೂ ಎಂದು ಅವಾಜ್ ಹಾಕಿದ್ದಾನೆ.
ಬಿಎಂಟಿಸಿ ವೋಲ್ವೋ ಬಸ್ ಅತ್ತಿಬೆಲೆಯಿಂದ ಮೆಜಸ್ಟಿಕ್ಗೆ ಹೋಗುತ್ತಿತ್ತು. ಬೆದರಿಕೆ ಹಾಕಿದ ಪ್ರಯಾಣಿಕ ಕೊನಪ್ಪನ ಅಗ್ರಹಾರದಲ್ಲಿ ಬಸ್ ಹತ್ತಿದ್ದಾನೆ. ನಿರ್ವಾಹಕ ಪ್ರಯಾಣಿಕರಿಗೆ ಟಿಕೆಟ್ ನೀಡುವ ಸಂಬಂಧ ಬಸ್ ಅನ್ನು ಅದೇ ನಿಲ್ದಾಣದಲ್ಲಿ ಕೆಲ ಹೊತ್ತು ನಿಲ್ಲಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕ ಹೊಸ ರೋಡ್ ಬಸ್ ನಿಲ್ದಾಣದಲ್ಲಿ ಬಸ್ನಿಂದ ಇಳಿದು, ಬ್ಯಾಗ್ನಲ್ಲಿದ್ದ ಸ್ಕ್ರೂಡ್ರೈವರ್ ತೆಗೆದು, ಚಾಲಕ ಮತ್ತು ನಿರ್ವಾಹಕನಿಗೆ ತೋರಿಸಿ, ಚುಚ್ಚಿ ಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.