ಬೆಂಗಳೂರು:- ರಾಜ್ಯಪಾಲರು ಒಪ್ಪಿಗೆ ಕೊಟ್ರೆ ಮೈಕ್ರೋ ಫೈನಾನ್ಸ್ ಬಿಲ್ನಲ್ಲಿ ಬದಲಾವಣೆ ಮಾಡ್ತೀವಿ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಇವತ್ತು ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ. ರಾಜ್ಯಪಾಲರು ಅವರ ಕಾನೂನು ತಜ್ಞರ ಜೊತೆ ಮಾತನಾಡಿ ಅಂತಿಮವಾಗಿ ಸಹಿ ಹಾಕಬಹುದು. ಅವರು ಸಹಿ ಹಾಕಿದರೆ ಇವತ್ತು ಸುಗ್ರೀವಾಜ್ಞೆ ಜಾರಿಯಾಗಬಹುದು ಎಂದರು.
ಬಿಲ್ನಲ್ಲಿ ಕೆಲ ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಒಂದು ವೇಳೆ ರಾಜ್ಯಪಾಲರು ಕೆಲ ಅಂಶಗಳ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡಿ ಕಳುಹಿಸುತ್ತೇವೆ ಎಂದರು.