ಬೆಂಗಳೂರು:- ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮುಂಜಾನೆ, ಬೆಳಗ್ಗಿನ ಹೊತ್ತು ಮಂಜು ಮುಸುಕಿದ ವಾತಾವರಣ ಇರಲಿದೆ. ಸಹಜವಾಗಿಯೇ ಕೆಲವು ಕಡೆಗಳಲ್ಲಿ ಸಂಜೆಯಾಗುತ್ತಿದ್ದಂತೆ ಚಳಿ ಆಗಲಿದ್ದು, ತಡರಾತ್ರಿಯಾಗುತ್ತಿದ್ದಂತೆ ಚಳಿಯ ತೀವ್ರತೆ ಹೆಚ್ಚಾಗಬಹುದು.
ಬಹುತೇಕ ಕಡೆಗಳಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ವಾತಾವರಣದ ಉಷ್ಣಾಂಶವು 2 ರಿಂದ 3 ಡಿಗ್ರಿ ಸೆಲ್ಶಿಯಸ್ನಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಬೆಳಗ್ಗೆ 8.30ರಿಂದ ಜನವರಿ 12 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಚಳಿ ಮತ್ತು ಒಣ ಹವೆ ಇರಲಿದೆ. ಕೆಲವು ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ನಿರೀಕ್ಷಿಸಬಹುದು ಎಂದು ವರದಿ ಹೇಳಿದೆ.
ಕರಾವಳಿ ಕರ್ನಾಟಕದ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ನಾಲ್ಕಾರು ದಿನಗಳಲ್ಲಿ ಕೆಲವು ಕಡೆ ಸಾಧಾರಣದಿಂದ ಭಾರಿ ಮಳೆಯಾಗಿತ್ತು. ಈ ವಾತಾವರಣದ ನಡುವೆ, ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಶಿಯಸ್ನಷ್ಟು ಹೆಚ್ಚಾಗಿತ್ತು. ಈ ಅನುಭವ ಇನ್ನೂ ಎರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.