ಬೆಂಗಳೂರು: ಕಮಿಷನ್ ಪ್ರಮಾಣವನ್ನು ಶೇ 5 ರಷ್ಟು ಹೆಚ್ಚು ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಮಿಷನ್ ಪ್ರಮಾಣವನ್ನು ಶೇ 5 ರಷ್ಟು ಹೆಚ್ಚು ಮಾಡಲು ಕಾಂಗ್ರೆಸ್ ಹೊರಟಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಮಿಷನ್ ಹೆಚ್ಚಾಗಲಿದೆ. ಗುತ್ತಿಗೆದಾರರು ಆತ್ಮಹತ್ಯೆಗೆ ಅರ್ಜಿ ಹಾಕಿಕೊಳ್ಳುವ ಕಾಲ ಬಂದಿದೆ.
ರಾಜ್ಯಪಾಲರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ದಾಖಲೆ ಇದೆಯಾ ಎಂದು ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಈ ಹಿಂದೆ 40 ಪರ್ಸೆಂಟ್ ಆರೋಪಕ್ಕೆ ದಾಖಲೆ ಕೊಟ್ಟಿದ್ದಿರಾ? ಇದ್ಯಾವ ನ್ಯಾಯ? ಇದು 60 ಪರ್ಸೆಂಟ್ ಲೂಟಿಯ ಸರ್ಕಾರ. ಕುಮಾರಸ್ವಾಮಿ ಹೇಳಿಕೆಯನ್ನ ಸಮರ್ಥನೆ ಮಾಡುತ್ತೇನೆ ಎಂದು ಹೇಳಿದರು.
ಇನ್ನೂ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ. ಬಿಜೆಪಿ ಗಿಂತ ಹೆಚ್ಚು ಅಭಿವೃದ್ಧಿ ಮಾಡಿದ್ದೇವೆ. ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಹೆಚ್ಚು ಅನುದಾನ ಕೊಟ್ಟಿರುವುದಾಗಿ ಹೇಳಿದ್ದಾರೆ. ಗಂಗಾ ಕಲ್ಯಾಣದಲ್ಲಿ ಬಿಜೆಪಿ 60 ಕೋಟಿ ರೂ. ಕೊಟ್ಟಿತ್ತು, ಈಗ 80 ಕೋಟಿ ರೂ. ಆಗಬೇಕು. ಆದರೆ, ಅವರು ಕೊಟ್ಟಿದ್ದು ಕೇವಲ 40 ಕೋಟಿ ರೂ. ಅಷ್ಟೆ ಎಂದು ಅಶೋಕ್ ಹೇಳಿದರು.