ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಂದ ಸೇವಾ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಆಹಾರ ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಿದೆ ಎನ್ನಲಾಗಿದೆ.
ದೊಡ್ಡದೊಡ್ಡ ರೆಸ್ಟೋರೆಂಟ್ ಹಾಗೂ ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸೇವಾ ಶುಲ್ಕವನ್ನು ವಿಧಿಸಲಾಗುತ್ತಿದೆ. ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು 2022 ರಲ್ಲಿ ಗ್ರಾಹಕರು ಸೇವಾ ಶುಲ್ಕವನ್ನು ಪಾವತಿಸಲು ಒತ್ತಾಯಿಸುವಂತಿಲ್ಲ ಎನ್ನುವ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದ್ದರೂ ಸರ್ವಿಸ್ ಚಾರ್ಜ್ ಹೆಸರಿನಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ
ಕೆಲವು ರೆಸ್ಟೋರೆಂಟ್ಗಳಲ್ಲಿ ಯಾವುದೇ ರೀತಿಯ ಸೇವಾ ಶುಲ್ಕವನ್ನು ವಿಧಿಸದಿದ್ದರೂ, ಇನ್ನು ಕೆಲವು ಕಡೆಗಳಲ್ಲಿ ಸೇವಾ ಶುಲ್ಕದ ಹೆಸರಿನಿಂದ ಗ್ರಾಹಕರಿಂದ ಇಂತಿಷ್ಟು ಹಣವನ್ನು ವಸೂಲಿ ಮಾಡಲಾಗುತ್ತಿದೆ. ಅದರಲ್ಲಿಯೂ ಹೈ-ಎಂಡ್ ಫೈನ್ ಡೈನಿಂಗ್ ಸ್ಪಾಟ್ಗಳು ಮತ್ತು ರೆಸ್ಟೋಬಾರ್ಗಳಲ್ಲಿ ಸೇವಾ ಶುಲ್ಕ ಕಡ್ಡಾಯ ಎಂದು ಮೆನುವಿನಲ್ಲಿ ನಮೂದಿಸಲಾಗಿದೆ. ಈ ರೆಸ್ಟೊರೆಂಟ್ಗಳಲ್ಲಿ ಆಹಾರ ಪದಾರ್ಥಗಳೇ ದುಬಾರಿ ಎನ್ನುವುದು ಒಂದೆಡೆಯಾದರೆ, ಸೇವಾ ಶುಲ್ಕ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಯನ್ನು ಗ್ರಾಹಕರಿಂದ ವಸೂಲಿ ಮಾಡಲಾಗುತ್ತಿದೆ
ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಕೆಫೆ, ಹೋಟೆಲ್ ಗಳಿಗೇನು ಕೊರತೆಯಿಲ್ಲ. ಬೆಂಗಳೂರಿನಲ್ಲಿ ರುಚಿಗೆ ಅನುಗುಣವಾಗಿ ಆಸ್ವಾದಿಸಬಹುದಾದ ಅದೆಷ್ಟೋ ರೆಸ್ಟೋರೆಂಟ್ ಗಳಿವೆ. ಆದರೆ ದೊಡ್ಡದೊಡ್ಡ ರೆಸ್ಟೋರೆಂಟ್ ಹಾಗೂ ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸೇವಾ ಶುಲ್ಕವನ್ನು ವಿಧಿಸಲಾಗುತ್ತಿದೆ. ಈ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ