ಬೆಂಗಳೂರು:- ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್ಗಳಿಗೆ ಹೈಕೋರ್ಟ್ ಅನುಮತಿ ನೀಡಿದೆ.
ಏ. 26 ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ಹೋಟೆಲ್ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.
ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತಿನೊಂದಿಗೆ, ಅರ್ಜಿದಾರರ ಸಂಘ ಮತ್ತು ಅದರ ಸದಸ್ಯರು 2024 ರ ಏಪ್ರಿಲ್ 26, ರಂದು ಬೆಂಗಳೂರಿನಲ್ಲಿ ಮತದಾರರಿಗೆ ಉಚಿತ ಆಹಾರವನ್ನು ವಿತರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ
ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದು ಈ ಕೆಲಸ ಮಾಡುತ್ತಿಲ್ಲ. ಮತ ಚಲಾಯಿಸಿದವರಿಗೆ ಮಾತ್ರ ಈ ರೀತಿಯ ಉಚಿತ ಆಹಾರ ನೀಡಲಾಗುತ್ತದೆ ಎಂದು ಅರ್ಜಿದಾರರು ಹೈಕೋರ್ಟ್ಗೆ ಸಲ್ಲಿಸಿದ್ದ ಮನವಿಯಲ್ಲಿ ಉಲ್ಲೇಖಿಸಿದ್ದರು