ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು 35-36 ಡಿ.ಸೆ ವರೆಗೆ ತಲುಪಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲೂ ಬಿಸಿಲ ವಾತಾವರಣ ಇರಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 2 ಡಿ.ಸೆ ಏರಿಕೆ ಆಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.