ನ್ಯೂಯಾರ್ಕ್: ಲೂಯಿಸ್ ವ್ಯುಟನ್ ಸಿಇಒ ಮತ್ತು ಅಧ್ಯಕ್ಷ ಬರ್ನಾರ್ಡ್ ಅರ್ನಾಲ್ಟ್ ಅವರ ಸಂಪತ್ತು ಒಂದೇ ದಿನದಲ್ಲಿ 200 ಶತಕೋಟಿ ಡಾಲರ್ ನಷ್ಟು ಹೆಚ್ಚಿದ್ದು ಈ ಮೂಲದ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.
ಇದುವರೆಗೆ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಟೆಸ್ಲಾದ ಸಿಇಒ ಎಲಾನ್ ಮಸ್ಕ್ 2ನೇ ಸ್ಥಾನಕ್ಕೆ ಹಾಗೂ ಅಮಝಾನ್ ನ ಸ್ಥಾಪಕ ಜೆಫ್ ಬೆಝೋಸ್ 3ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.
ಐಷಾರಾಮಿ ಬಳಕೆಯ ವಸ್ತುಗಳನ್ನು ಉತ್ಪಾದಿಸುವ ಎಲ್ವಿಎಂಎಚ್ ನ ಶೇರುಗಳ ಮೌಲ್ಯ 30%ರಷ್ಟು ಹೆಚ್ಚುವ ಮೂಲಕ ಬರ್ನಾರ್ಡ್ ಅರ್ನಾಲ್ಟ್ ಅವರ ಸಂಪತ್ತಿನ ಮೌಲ್ಯ 201 ಶತಕೋಟಿ ಡಾಲರ್ಗೆ ಏರಿಕೆಯಾಗಿದೆ ಎಂದು ಬ್ಲೂಮ್ಬರ್ಗ್ ಕೋಟ್ಯಾಧಿಪತಿಗಳ ಸೂಚ್ಯಾಂಕವನ್ನು ಉಲ್ಲೇಖಿಸಿ `ದಿ ಗಾರ್ಡಿಯನ್’ ವರದಿ ಮಾಡಿದೆ.