ಬೆಂಗಳೂರು: ಬೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೊತ್ತನೂರು ಬೆಸ್ಕಾಂ ಸಹಾಯಕ ಇಂಜಿನಿಯರ್ ಆದ ರಾಕೇಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. 30 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು, ದಾಳಿ ನಡೆಸಿ, ಬಂಧಿಸಿದ್ದಾರೆ. ಸದ್ಯ ರಾಜೇಶ್ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು,
ಕಚೇರಿಯಲ್ಲಿ 2 ಲಕ್ಷ ಹೆಚ್ಚುವರಿ ಹಣ ಕೂಡ ಪತ್ತೆ ಮಾಡಿದ್ದಾರೆ. ಇನ್ನೂ ಹೆಚ್ಚುವರಿ ಹಣದ ಬಗ್ಗೆ ಹೆಚ್ಚಿನ ವಿಚಾರಣೆ ಮಾಡುತ್ತಿರುವ ಲೋಕಾಯುಕ್ತ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನೂ ಬೆಂಗಳೂರಿನ ಕೊತ್ತನೂರು ಬೆಸ್ಕಾಂ ಸಹಾಯಕ ಇಂಜಿನಿಯರ್ ರಾಕೇಶ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಎಫ್ಐಆರ್ ಕೂಡ ದಾಖಲು ಮಾಡಲಾಗಿದೆ. ರಾಜೇಶ್ ಕಚೇರಿಯಲ್ಲಿ 2 ಲಕ್ಷ ರೂ. ಹೆಚ್ಚುವರಿ ನಗದು ಕೂಡ ಪತ್ತೆ ಆಗಿದೆ. ಸದ್ಯ ರಾಜೇಶ್ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.