ಮೈಸೂರು: ರಾಜ್ಯದ ಮತದಾರರು ರಾಜಕೀಯ ಪಕ್ಷಗಳ ಭವಿಷ್ಯ ಬರೆದಾಗಿದೆ. ಕದನ ಕಲಿಗಳ ಹಣೆ ಬರಹ ಮತಯಂತ್ರದಲ್ಲಿ ಸುಭದ್ರವಾಗಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ತೀವ್ರ ಕುತೂಹಲ ಕೆರಳಿಸಿವೆ. ಮತದಾನ ಮುಗೀತಿದ್ದಂತೆ ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ.
ಬೆಟ್ಟಿಂಗ್ ಬಜಾರ್ನಲ್ಲಿ ಬಾಜಿ ಆಟ ಜೋರಾಗೇ ನಡೆಯುತ್ತಿದ್ದು, ಕಾರ್ಯಕರ್ತರು ಕೈಯಲ್ಲಿ ಕಂತೆ ಕಂತೆ ಹಣ ಹಿಡಿದು ಎದುರಾಳಿಗಳಿಗೆ ಸವಾಲು ಹಾಕುತ್ತಿದ್ದಾರೆ.
ಅದರಲ್ಲೂ ಮುಖ್ಯವಾಗಿ ಈ ಬಾರಿ ಸದ್ದು ಮಾಡಿರುವ ವರುಣಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರೆ, ಇತ್ತ ಸೋಮಣ್ಣ ಗೆಲ್ಲಲಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಅಲ್ಲದೇ ಸೋಮಣ್ಣ ಪರ ಬೆಟ್ಟಿಂಗ್ ಸಹ ಜೋರಾಗಿದೆ.
ಸಿದ್ದರಾಮಯ್ಯ ವಿರುದ್ದ ಸೋಮಣ್ಣ 25 ಸಾವಿರ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಬೆಟ್ಟಿಂಗ್ ಆಹ್ವಾನ ನೀಡಿದ್ದಾರೆ. 3,300 ಚದರಡಿ ನಿವೇಶನ ಅಗ್ರಿಮೆಂಟ್ ಮಾಡಿಕೊಡುತ್ತೇನೆ ಎಂದು ಬಹಿರಂಗ ಸವಾಲು ಹಾಕಿದ್ದಾರೆ.