ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಮುಗಿದರೂ ಒಬ್ಬರ ಮೇಲೆ ಒಬ್ಬರು ಆರೋಪ ಮಾಡೋದು ಮಾತ್ರ ಿನ್ನೂ ಕಮ್ಮಿ ಆಗಿಲ್ಲ. ಅದೇ ರೀತಿ ಭದ್ರಾವತಿ ಶಾಸಕ ಸಂಗಮೇಶ್ವರ್ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
ನನಗೂ ಸಚಿವ ಸ್ಥಾನಕ್ಕೆ ಬಿಜೆಪಿ ಕೋಟಿ ಕೋಟಿ ಆಫರ್ ನೀಡಿತ್ತು, ಆದ್ರೆ ನಾನು ಹೋಗಿಲ್ಲ ಎಂದು ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ‘ಬಿಜೆಪಿಯಿಂದ ನನಗೆ ಸಚಿವ ಸ್ಥಾನಕ್ಕೆ ಕೋಟಿ ಕೋಟಿ ಆಫರ್ ಬಂದಿತ್ತು, ಆದರೆ ನಾನು ಪಕ್ಷ ನಿಷ್ಟೆಯಿಂದ ಹೋಗಲಿಲ್ಲ.
ನನಗೆ ಸಚಿವ ಸ್ಥಾನ ಸಿಗದಿದ್ದರೂ ಕಾಂಗ್ರೆಸ್ ನಲ್ಲೇ ಇರುತ್ತೇನೆ. ನಾನು ಹಿರಿಯ ಎಂಬುದನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವ ವಿಶ್ವಾಸದಲ್ಲಿದ್ದೇನೆ ಎಂದರು.
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ನಾನು 4 ಬಾರಿ ಗೆದ್ದಿದ್ದೇನೆ ನನಗೂ ಸಚಿವ ಸ್ಥಾನ ನೀಡಿ ಎಂದು ಹೇಳಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಭದ್ರಾವತಿ ಕ್ಷೇತ್ರದ ಬಿಕೆ ಸಂಗಮೇಶ್ವರ್ ಗೆಲುವು ಸಾಧಿಸಿದ್ದು, ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.