ಹಾವೇರಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದ ಆಡಳಿತಾರೂಢ ಕಾಂಗ್ರೆಸ್ ಶಿಗ್ಗಾವಿ ಟಿಕೆಟ್ ಘೋಷಣೆ ಮಾಡದೇ ಉಳಿಸಿಕೊಂಡಿತ್ತು.
ಈ ಹಿನ್ನೆಲೆಯಲ್ಲಿ ಅಳೆದು ತೂಗಿ ಕಾಂಗ್ರೆಸ್ ಹೈಕಮಾಂಡ್ ಅಲ್ಪಸಂಖ್ಯಾತರಿಗೆ ಮಣೆ ಹಾಕಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನಿದ ಸ್ಪರ್ಧಿಸಿ ಬಸವರಾಜ ಬೊಮ್ಮಾಯಿ ವಿರುದ್ಧ ಸೋಲು ಅನುಭವಿಸಿದ್ದ ಯಾಸಿರ್ ಅಹಮದ್ ಖಾನ್ ಪಟಾಣ್ಗೆ ಮತ್ತೊಮ್ಮೆ ಟಿಕೆಟ್ ಘೋಷಿಸಿದೆ.
ಇನ್ನೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ನಾಮಪತ್ರ ಸಲ್ಲಿಸಿದ್ದಾರೆ. ತನ್ನ ಆಪ್ತರೊಂದಿಗೆ ಬಂದು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಅಖಾಡಕ್ಕೆ ಇಳಿದಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾದ್ಯಮವರೊಂದಿಗೆ ಮಾತನಾಡಿದ ಅವರು, ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ, ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೇ ಎಂದು ಹೇಳಿದರು. ಕಳೆದ ನಾಲ್ಕು ತಿಂಗಳಿಂದ ನಿರಂತರ ಕ್ಷೇತ್ರ ಸುತ್ತಾಡಿದ್ದೇನೆ. ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ. ನ್ಯಾಯದ ಅಡಿಯಲ್ಲಿ ಅಲ್ಪ ಸಂಖ್ಯಾತರ ಸಮಾಜಕ್ಕೆ ಟಿಕೆಟ್ ನೀಡಲಾಗಿದೆ ಎಂದರು.
ಇನ್ನೂ ಯಾಸಿರ್ ಖಾನ್ ಪಠಾಣ್ ರೌಡಿಶೀಟರ್ ಎನ್ನುವ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯವಾಗಿ ಹಿಂದೆ ಒಂದೆರಡು ಪ್ರಕರಣ ಇತ್ತು ಅಷ್ಟೆ, ನನ್ನ ಮೇಲೆ ಯಾವುದೇ ಪ್ರಕರಣಗಳಿಲ್ಲ. ಅದಲ್ಲದೆ ಅಜ್ಜಂಪೀರ್ ಖಾದ್ರಿ ಅವರು ನನ್ನ ಹಿರಿಯ ಸಹೋದರರು. ಖಾದ್ರಿ ಅವರು ಏನೇ ಹೇಳಿದ್ರು ಅದು ನನಗೆ ಆಶೀರ್ವಾದ ಎಂದು ಹೇಳಿದರು.