ಧಾರವಾಡ : ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಜನಮನ್ನಣೆಯಿಂದಾಗಿ, ಈಗ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಹುಟ್ಟಿಸಿದೆ ಎಂದು ಸಚಿವ ಸಂತೋಷ ಲಾಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ. ಅದು ಬಿಜೆಪಿ ಜೆಡಿಎಸ್ ಪಕ್ಷಕ್ಕೆ ಬಿಟ್ಟ ವಿಚಾರ, ನಾವು ಕಳೆದ ಭಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿ ಮಾಡಿಕೊಳ್ಳುವುದು ಬಿಜೆಪಿ ಕಾಂಗ್ರೆಸ್ ಪಕ್ಷಗಳ ನಿಲುವು ಎಂದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭಯ ಎದುರಾಗಿದೆ. ಬಿಜೆಪಿ ಬೆಂಕಿ ಹಂಚುವ ಕೆಲಸ ಮಾಡುತ್ತಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಬಿರುಕು ಮೂಡಿಸುವ ಕೆಲಸ ಮಾಡಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಮಾತನಾಡಿದ್ದಾರೆ. ರಾಹುಲ್ ಗಾಂಧಿಯವ ಜನಪ್ರಿಯತೆ ಹೆಚ್ಚುತ್ತಲೇ ಇದೆ, ರಾಹುಲ್ ಗಾಂಧಿ ಅದಾನಿ ಮೋದಿಗೆ ಏನು ಸಂಬಂಧ ಎಂದು ಕೇಳುವುದಕ್ಕೆ ಶುರು ಮಾಡಿದ್ದಾರೆ. ಆಗ ಅವರನ್ನು ಅಸಂವಿಧಾನಿಕ ಪದದ ಲೋಪದೋಷ ಪದ ಹುಡುಕಿ ಲೋಕಸಭೆ ಸದಸ್ಯತ್ವ ಅನರ್ಹ ಮಾಡಿದ್ದಾರೆ. ಇದನ್ನೆಲ್ಲ ಭಾರತ ದೇಶ ನೋಡುತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.