ಬೆಂಗಳೂರು: ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಸ್ವಾಗತಿಸಿದ್ದಾರೆ.
https://x.com/SharavanaTa/status/1753698238912516194?t=6CZSRhjx7Ph6qIqylK69UQ&s=08
ರಾಷ್ಟ್ರ ರಾಜಕಾರಣದ ಭೀಷ್ಮ ಎಂದೇ ಜನಪ್ರಿಯರಾದ ಮಾಜಿ ಉಪ ಪ್ರಧಾನಿ, ಅಪ್ರತಿಮ ಹೋರಾಟಗಾರ, ಹಿರಿಯ ಮುತ್ಸದ್ದಿ ರಾಜಕಾರಣಿ, ಸಂಘಟಕ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತರತ್ನ ನೀಡುವ ಕೇಂದ್ರ ಸರ್ಕಾರದ ನಿರ್ಣಯ ಅತ್ಯಂತ ಶ್ಲಾಘನೀಯ.
ಈ ಮೂಲಕ ಅಡ್ವಾಣಿಜೀ ಅವರ ದೇಶಸೇವೆಗೆ ಸೂಕ್ತವಾದ ಗೌರವ ದೊರೆತಿದೆ ಹಾಗಾಗಿ ಹಾರ್ದಿಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.