ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾನಿ ಅವರಿಗೆ ಭಾರತ ರತ್ನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿ ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು ಎಂದು ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ.
https://x.com/BSYBJP/status/1753672420173750627?t=aFKIDqeiGmHaY3bZLHFLBA&s=08
ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು, ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು. ವೈಯಕ್ತಿಕವಾಗಿ ಕೂಡ, ಅವರೊಂದಿಗಿನ ಒಡನಾಟ, ಸಂಘಟನಾ ಕಾರ್ಯಗಳಲ್ಲಿ ಅವರ ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲಾರೆ. ಆ ಮೇರು ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಲ್ಲಿಸಲಾಗುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರ ಹಾಗೂ ಅವರ ಅಭಿಮಾನಿಗಳ ಪರವಾಗಿ ಅವರಿಗೆ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇನ್ನೂ ಸುದೀರ್ಘ ಕಾಲ ಆ ದೇವರು ಅವರಿಗೆ ಉತ್ತಮ ಆರೋಗ್ಯದೊಂದಿಗೆ ನಮಗೆ ಪ್ರೇರಣೆ ನೀಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಕೋರುತ್ತೇನೆ.