ನವದೆಹಲಿ: ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡಿಕೊಂಡಿರುವ ವೀಡಿಯೊ ವೈರಲ್ ಆಗಿರುವ ಬಗ್ಗೆ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡುತ್ತಿರುವ ವೀಡಿಯೊ ಎಲ್ಲ ಕಡೆ ವೈರಲ್ ಆಗಿದೆ. ಮೆಟ್ರೋದಲ್ಲಿ ಹಸ್ತಮೈಥುನ ಮಾಡಿಕೊಂಡಿರುವ ಯುವಕನ ಸುತ್ತಮುತ್ತಿನಲ್ಲಿ ಕುಳಿತಿದ್ದ ಇತರ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡಿದೆ, ಈ ಕಾರಣಕ್ಕೆ ಪಕ್ಕದಲ್ಲೇ ಕುಳಿತ ಪ್ರಯಾಣಿಕರು ದೂರ ಸರಿದಿದ್ದಾರೆ.
ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ನೀಡಿರುವುದಾಗಿ ಟ್ವಿಟರ್ನಲ್ಲಿ ಮಲಿವಾಲ್ ಹೇಳಿದ್ದಾರೆ. ದೆಹಲಿ ಮೆಟ್ರೋದಲ್ಲಿ ವ್ಯಕ್ತಿಯೊಬ್ಬರು ನಾಚಿಕೆಯಿಲ್ಲದೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೈರಲ್ ವೀಡಿಯೊ ಕಂಡುಬಂದಿದೆ. ಇದು ತುಂಬಾ ಅಸಹ್ಯಕರ ಮತ್ತು ನೋವಿನ ಸಂಗತಿಯಾಗಿದೆ. ಈ ನಾಚಿಕೆಗೇಡಿನ ಕೃತ್ಯದ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ನಾನು ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ಸೂಚನೆ ನೀಡುತ್ತಿದ್ದೇನೆ ಎಂದು ಟ್ವಿಟರ್ನಲ್ಲಿ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.