ಅಮೆರಿಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ನಿರೀಕ್ಷೆಯೇ ಮಾಡದಂತೆ ಮುಂಬರುವ ಚುನಾವಣಾ ಸ್ಪರ್ಧೆಯಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿದಿದ್ದಾರೆ.
ಬೈಡನ್ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದಂತೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರೆಟ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಎಂದು ಬೈಡೆನ್ ಶಿಫಾರಸ್ಸು ಮಾಡಿದ್ದು ಅವರಿಗೆ ಬೆಂಬಲ ನೀಡುವಂತೆ ಕೇಳಿಕೊಂಡಿರುವುದು ಪ್ರತಿಯೊಬ್ಬರಿಗೂ ಆಶ್ಚರ್ಯ ಉಂಟು ಮಾಡಿದೆ.
ಈ ಕುರಿತು ಬೈಡೆನ್ ಅವರು X ನಲ್ಲಿ ತನ್ನ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ದೇಶದ ಹಿತಾಸಕ್ತಿಗಾಗಿ ಮುಂಬರುವ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ ಜೊತೆಗೆ ಮುಂದಿನ ಅಭ್ಯರ್ಥಿಯಾಗಿ ಪಕ್ಷದ ಹಾಲಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ ಅವರನ್ನು ಆಯ್ಕೆ ಮಾಡಿರುವುದಾಗಿ ಪೋಸ್ಟ್ ಮಾಡಿದ್ದಾರೆ,
ಅಧ್ಯಕ್ಷೀಯ ರೇಸ್ ನಲ್ಲಿರುವ ಕಮಲಾ ಹ್ಯಾರಿಸ್ ಕೂಡ ಬೈಡೆನ್ ಅವರ ಹೇಳಿಕೆ ಪ್ರತಿಕ್ರಿಯೆ ನೀಡಿದ್ದು, ‘ಅಧ್ಯಕ್ಷರ ಅನುಮೋದನೆಯನ್ನು ಸ್ವೀಕರಿಸಲು ನನಗೆ ಗೌರವವಿದೆ ಅಲ್ಲದೆ ಡೆಮಾಕ್ರಟಿಕ್ ಪಕ್ಷವನ್ನು ಕಾರ್ಯರೂಪಕ್ಕೆ ತರಲು ನನ್ನ ಕೈಯಿಂದ ಆಗುವ ಪ್ರಯತ್ನ ಮಾಡುವುದಾಗಿ ಹೇಳಿಕೊಂಡಿದ್ದಾರೆ.
‘ಟ್ರಂಪ್ ಸೋಲು ನನ್ನ ಗುರಿ: ಕಮಲಾ
ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗಿ ತಮ್ಮನ್ನು ಬೆಂಬಲಿಸಿದ್ದಕ್ಕಾಗಿ ಅಧ್ಯಕ್ಷ ಜೋ ಬೈಡನ್ ಅವರಿಗೆ ಧನ್ಯವಾದ ಅರ್ಪಿಸಿದ ಕಮಲಾ ಹ್ಯಾರಿಸ್ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ‘ಪ್ರಾಜೆಕ್ಟ್ 2025’ ಅಜೆಂಡಾವನ್ನು ಸೋಲಿಸಲು ದೇಶವನ್ನು ಒಗ್ಗೂಡಿಸುವುದು ನಮ್ಮ ಮುಂದಿರುವ ಗುರಿ ಎಂದು ಹೇಳಿದ್ದಾರೆ.
ಜೋ ಬೈಡನ್ ಉಮೇದುವಾರಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಟ್ರಂಪ್ ಜೊತೆಗಿನ ಚರ್ಚೆಯಲ್ಲಿ ವಿಫಲವಾಗಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಈ ಎಲ್ಲ ಬೆಳವಣಿಗೆಯ ನಂತರ ಭಾನುವಾರ ತನ್ನ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.