ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಡುಗಡೆಗೆ ಎದುರು ನೋಡ್ತಿದ್ದಾರೆ. ಈಗಾಗಲೇ ದರ್ಶನ್ ಜಾಮೀನು ಅರ್ಜಿ ವಜಾ ಮಾಡಲಾಗಿದ್ದು ಇದೀಗ ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಮಧ್ಯೆ ದರ್ಶನ್ಗೆ ಕೊಂಚ ರಿಲೀಫ್ ಸಿಕ್ಕಿದೆ. ಅಂದ ಹಾಗೆ ದರ್ಶನ್ ಗೆ ರಿಲೀಫ್ ಸಿಕ್ಕಿರುವುದು ಫಿಜಿಯೋ ಥೆರಪಿ ಚಿಕಿತ್ಸೆ ಮೂಲಕ.
ಶುಕ್ರವಾರ ಸಂಜೆಯಿಂದಲೇ ವಿಮ್ಸ್ ಆಸ್ಪತ್ರೆ ವೈದ್ಯರಿಂದ ದರ್ಶನ್ ಗೆ ಫಿಜಿಯೋಥೆರೆಪಿ ಚಿಕಿತ್ಸೆ ನೀಡಲಾಗುತ್ತಿದೆ. ಜೈಲಿನ ಹೈ ಸೆಕ್ಯೂರಿಟಿ ಸೆಲ್ನಲ್ಲೇ ವಿಮ್ಸ್ ವೈದ್ಯರು ಒಂದು ಗಂಟೆ ಫಿಜಿಯೋಥೆರೆಪಿ ನೀಡಿದ್ದಾರೆ. ಇದರಿಂದ ದರ್ಶನ್ ಕೊಂಚ ರಿಲೀಫ್ ಆಗಿದ್ದಾರೆ. ದರ್ಶನ್ ಬೆನ್ನಿನ ಭಾಗದಲ್ಲಿ ಊತ ಕಾಣಿಸಿಕೊಂಡಿದ್ದು, ಈಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನ್ಯೂರೋ ಹಾಗೂ ಆರ್ಥೋಪಿಡಿಷನ್ ವೈದ್ಯರು ದರ್ಶನ್ ಅವರ ದೇಹವನ್ನು ಸ್ಕ್ಯಾನಿಂಗ್ ಮಾಡಿದ್ದರು. ಈ ವೇಳೆ ಸರ್ಜರಿ ಹಾಗೂ ಫಿಜಿಯೋಥೆರಪಿ ಮಾಡಿಸುವಂತೆ ಸಲಹೆ ನೀಡಿದ್ದರು. ಸದ್ಯ ಸರ್ಜರಿಯನ್ನು ಬೆಂಗಳೂರಿಗೆ ಹೋಗಿ ಮಾಡಿಸಿಕೊಳ್ಳುವುದಾಗಿ ಹೇಳಿರುವ ದರ್ಶನ್ ಗೆ ಫಿಜಿಯೋಥೆರೆಪಿ ಆರಂಭಿಸಿದ್ದಾರೆ.
ದರ್ಶನ್ಗೆ ಬುಧವಾರವೇ ಫಿಜಿಯೋಥೆರೆಪಿ ಆರಂಭ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಫಿಜಿಯೋಥೆರಪಿ ಮಾಡಿಸಲು ಸಾಧ್ಯವಾಗಿರಲಿಲ್ಲ. ಈಗ ಅವರು ಫಿಜಿಯೋಥೆರೆಪಿ ಮಾಡಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ಮೆಡಿಕಲ್ ಬೆಡ್, ದಿಂಬು ಹಾಗೂ ಚೇರ್ಗಳನ್ನು ನೀಡಲಾಗಿದೆ.