2023ರ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸಿನಿಮಾ ರಂಗದ ನಟ, ನಟಿಯರು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದರೆ ಇತ್ತ ಶಿವರಾಜ್ ಕುಮಾರ್, ರಮ್ಯಾ, ದುನಿಯಾ ವಿಜಯ್ ಮತ್ತಿತರರು ಕಾಂಗ್ರೆಸ್ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ನಟ ಶಿವಣ್ಣ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಸಿಡಿದೆದ್ದಿದ್ದಾರೆ. ಶಿವಣ್ಣನ ಮುಂದೆ 10 ಪ್ರಶ್ನೆಗಳನ್ನ ಮುಂದಿಟ್ಟು ಟಾಂಗ್ ನೀಡಿದ್ದಾರೆ.
ನಟ ಶಿವರಾಜ್ ಕುಮಾರ್ ದುಡ್ಡಿಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರಕ್ಕೆ ಹೋಗಿದ್ದಾರೆ ಎನ್ನುವ ಅರ್ಥದಲ್ಲಿ ಪ್ರಶಾಂತ್ ಸಂಬರ್ಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದು, ಇಂತಹ ಮಾತುಗಳನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ಕೂಡಲೇ ಆ ಮಾತುಗಳನ್ನು ಅವರು ವಾಪಸ್ಸು ಪಡೆಯಬೇಕು. ನನ್ನ ಹತ್ತಿರ ದುಡ್ಡಿಲ್ಲವಾ? ನಾನು ಯಾವತ್ತೂ ದುಡ್ಡಿಗಾಗಿ ಕೆಲಸ ಮಾಡಿದವನು ಅಲ್ಲ. ಇಂತಹ ಮಾತುಗಳು ಶೋಭೆ ತರುವುದಿಲ್ಲ ಎಂದಿದ್ದರು. ಈ ಹೇಳಿಕೆ ಬೆನ್ನಲ್ಲೇ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪ್ರಶ್ನೆಗಳ ಮೂಲಕ ಶಿವಣ್ಣನಿಕೆಗೆ ಟೀಕೆ ಮಾಡಿದ್ದಾರೆ.
ಶಿವಣ್ಣನಿಗೆ ಹತ್ತು ಪ್ರಶ್ನೆಗಳು.?
1.ನೀವೇ ಹಿಂದುವಾಗಿ ಭಜರಂಗಿ ಹೆಸರಿನಲ್ಲಿ ನಟಿಸಿ ಕಾಂಗ್ರೆಸ್ ನವರ ಬಜರಂಗದಳದ ನಿಷೇಧದ ಬಗ್ಗೆ ತಮ್ಮ ನಿಲುವು ಏನು?
2.ಒಂದು ಉತ್ತಮ ಮತ್ತು ಸತ್ಯ ವಾದ ಚಿತ್ರವಾದ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ನಿಮ್ಮ ಕಾಂಗ್ರೆಸ್ ನಿಷೇಧಿಸುವುದಕ್ಕೆ ಮುಂದಾಗಿದೆ ನೀವು ಕನ್ನಡದ ಮೇರು ನಟನಾಗಿ ಮತ್ತು ನಿರ್ಮಾಪನಾಗಿ ನಿಮ್ಮ ನಿಲುವೇನು?
3.ನೀವು ಚಿತ್ರರಂಗದಿಂದ ಬಂದವರು, ಬೆಂಗಳೂರಿನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶಿಸಿದಾಗ ಕಾಂಗ್ರೆಸ್ ಅದಕ್ಕೆ ವಿರೋಧ ಪಡಿಸಿತ್ತು ಆಗ ಏಕೆ ನಿಮ್ಮ ದಿವ್ಯ ಮೌನ?
4.ಕನ್ನಡಿಗರ ಪರವಾಗಿದ್ದ ಕನ್ನಡ ಡಬ್ಬಿಂಗ್ ವಿರೋಧಿಸಿ ಈಗ ಅನ್ಯ ಭಾಷೆಯ ಚಿತ್ರದಲ್ಲಿ ನಟಿಸುತಿದ್ದೀರಾ.. ಇದು ಸರಿನಾ?
5.ಡಾ ರಾಜಕುಮಾರ್ ನಮ್ಮ ಆರಾಧ್ಯ ದೈವ ಮತ್ತು ರಾಜಕೀಯದಿಂದ ದೂರವಾಗಿದ್ದರು ಗೋಕಾಕ್ ಚಳುವಳಿ ಮತ್ತು ಅವರ ಕನ್ನಡ ಪರ ಹೋರಾಟ ಎಲ್ಲರಿಗೂ ಗೊತ್ತಿರುವ ವಿಚಾರ,ಅವರ ಮಗನಾಗಿ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು?
6.2020ರಲ್ಲಿ ಸ್ಯಾಂಡಲ್ವುಡ್ ಡ್ರಗ್ ವಿಷಯದಲ್ಲಿ ನೀವು ಏಕೆ ಮೌನವಾಗಿದ್ದಿರಿ? ಕರ್ನಾಟಕವನ್ನು ಮಾದಕ ಮುಕ್ತ ಮಾಡಲು ನಮ್ಮ ಯುವ ಜನರಿಗೆ ತಮ್ಮ ಸಂದೇಶವೇನು?
7.ಪಿಎಫ್ಐ ಮತ್ತು ಜಿಹಾದಿ ಜನರಿಂದ ಆರ್ಎಸ್ಎಸ್ ಹಿಂದೂ ಕಾರ್ಯಕರ್ತರ ಹತ್ಯೆಗಳ ಬಗ್ಗೆ ನಿಮ್ಮ ನಿಲುವು ಏನು .?
8.ನಿಮ್ಮ ಎಲ್ಲಾ ಚಿತ್ರದಲ್ಲಿ ಹೆಣ್ಣು ಮಕ್ಕಳನ್ನು ಗೌರವಿಸುವ ಪಾತ್ರ ಮಾಡುವ ತಾವು ಲವ್ ಜಿಹಾದ್ ಮೇಲೆ ನಿಮ್ಮ ನಿಲುವೇನು?
9.ಡಿಕೆ ಶಿವಕುಮಾರ್ ಅವರ ಭ್ರಷ್ಟಾಚಾರ ಮತ್ತು ಆದಾಯ ತೆರಿಗೆ ಪ್ರಕರಣದ ಬಗ್ಗೆ ನಿಮ್ಮ ಅಭಿಪ್ರಾಯವೇನು?
10.ಮುಸ್ಲಿಂ ಒಲಿಕರಣ ಕಾಂಗ್ರೆಸ್ ಮಂತ್ರವಾಗಿದೆ ಇದರ ಬಗ್ಗೆ ತಮ್ಮ ಅಭಿಪ್ರಾಯ? ಹಿಂದೂಗಳು ನಿಮ್ಮ ಚಿತ್ರವನ್ನು ನೋಡಬಾರದ.?
ಈ ರೀತಿಯ ಪ್ರಶ್ನೆಗಳನ್ನ ಕೇಳುವ ಮೂಲಕ ಕೈ ಪರ ಪ್ರಚಾರ ಮಾಡ್ತಿರೋ ಶಿವಣ್ಣರನ್ನ ಪ್ರಶಾಂತ್ ಸಂಬರ್ಗಿ ಕೆಣಕಿದ್ದಾರೆ. ಸಂಬರ್ಗಿ ಪೋಸ್ಟ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಸಂಬರ್ಗಿ ಈ ಹಿಂದಿನ ಪೋಸ್ಟ್ಗೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದರು. ನಾನು ಯಾರನ್ನು ಟೀಕೆ ಮಾಡಲು ಬಂದಿಲ್ಲ ಎಂದಿದ್ದಾರೆ. ಸದ್ಯ ಸಂಬರ್ಗಿ ಪೋಸ್ಟ್ ಗೆ ಶಿವರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ಹೊರ ಹಾಕ್ತಿದ್ದಾರೆ.