ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಕಳೆದ ವರ್ಷದ ಆಗಸ್ಟ್ನಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದ ಬಚ್ಚೇಗೌಡ ಈಗ ಅಧಿಕೃತವಾಗಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಚುನಾವಣಾ ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡದಿರಲು ಬಚ್ಚೇಗೌಡ ನಿರ್ಧರಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಿದ್ದಿದ್ದವು.