ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ (CBI Investigation) ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (High Court Of Karnataka), ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಏಪ್ರಿಲ್ 13ರವರೆಗೆ ವಿಸ್ತರಿಸಿದೆ.
ಸಿಬಿಐ ತನಿಖೆಗೆ ಅನುಮತಿ ಹಾಗೂ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಸದ್ಯ ವಿಚಾರಣೆ ನಡೆಸಿದ ಕೋರ್ಟ್ ಎರಡೂ ಅರ್ಜಿಗಳ ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿದೆ. ಸದ್ಯ ಡಿಕೆ ಶಿವಕುಮಾರ್ ಅವರು ನಿರಾಳರಾಗಿದ್ದಾರೆ.