ಬೆಂಗಳೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೆರಡು ದಿನಗಳಷ್ಟೇ ಬಾಕಿ ಉಳಿದಿವೆ. ಹೀಗಾಗಿ ಮತದಾರರ ಓಲೈಕೆಗಾಗಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಂದ ಅಂತಿಮ ಹಂತದ ಕಸರತ್ತು ಆರಂಭಗೊಂಡಿವೆ.
ಚುನಾವಣಾ ನೀತಿ ಸಂಹಿತೆ ಪ್ರಕಾರ ಇಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆ ಸಮಯದಿಂದ ಜಿಲ್ಲೆಯ ಮತದಾರರಲ್ಲದ ರಾಜಕೀಯ ನಾಯಕರು, ಸ್ಟಾರ್ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಹೀಗಾಗಿ ಬಹಿರಂಗ ಪ್ರಚಾರ ಮಾಡುವುದಕ್ಕೂ ಇನ್ನು ಕೆಲವೇ ತಾಸುಗಳಷ್ಟೇ ಉಳಿದಿವೆ. ಹೀಗಾಗಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಾ ಇವೆ.
ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ಹಾಗೂ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಭರ್ಜರಿ ಬೈಕ್ ರ್ಯಾಲಿ ನಡೆಸಿದರು. ನಗರದ ಬಸವನಗುಡಿಯಲ್ಲಿ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್ ಪರ ಬೆಂಬಲ ಸೂಚಿಸಿ ಬೃಹತ್ ಬೈಕ್ ರ್ಯಾಲಿಯನ್ನು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕೈಗೊಳ್ಳಲಾಯಿತು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.