ಉತ್ತರ ಪ್ರದೇಶ: ವಿದ್ಯುನ್ಮಾನ ಮತ ಯಂತ್ರಗಳನ್ನು ತಿರುಚದೇ ನ್ಯಾಯಯುತವಾಗಿ ಚುನಾವಣೆ ನಡೆಸಿದರೆ ಬಿಜೆಪಿ 180ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ನಾವು 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ ಎಂದು ಬಿಜೆಪಿ ಯಾವ ಆಧಾರದ ಮೇಲೆ ಹೇಳುತ್ತಿದೆ ಎಂದು ಪ್ರಶ್ನಿಸಿದರು. ಅವರೇನು ಜ್ಯೋತಿಷಿಗಳೇ? ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ, ಇದಕ್ಕಾಗಿ ಅವರು ಮೊದಲೇ ಏನಾದ್ರೂ ತಯಾರಿ ಮಾಡಿರಬೇಕು. ಹೀಗಾಗಿ, ನಾವು 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ ಎಂದು ಹೇಳುತ್ತಿರಬಹುದು.
ಇಲ್ಲವಾದರೆ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ ಎಂದು ಹೇಗೆ ತಾನೇ ಹೇಳಲು ಸಾಧ್ಯ? ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದರು. ಇಂದು ದೇಶದಲ್ಲಿ ಯಾವ ರೀತಿಯಾಗಿ ಚುನಾವಣೆ ನಡೆಯುತ್ತಿದೆ ಎಂದು ಗಮನಿಸಬೇಕಿದೆ. ಒಂದು ವೇಳೆ ಇವಿಎಂ ಯಂತ್ರಗಳನ್ನು ತಿರುಚದೇ ಇದ್ದರೆ ಬಿಜೆಪಿ 180ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲು ಸಾಧ್ಯವೇ ಇಲ್ಲ ಎಂದು ನಾನು ಆತ್ಮ ವಿಶ್ವಾಸದಿಂದ ಹೇಳುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.
ಬಿಜೆಪಿ 180ಕ್ಕೂ ಹೆಚ್ಚು ಸ್ಥಾನ ಗಳಿಸಲು ಸಾಧ್ಯವೇ ಇಲ್ಲ ಎಂದರು.
ನಾನು ಜನರ ದೃಷ್ಟಿಕೋನದಲ್ಲಿ ಚುನಾವಣೆಗಳನ್ನು ನೋಡುತ್ತೇನೆ ಎಂದ ಪ್ರಿಯಾಂಕಾ ಗಾಂಧಿ, ಚುನಾವಣೆಯನ್ನು ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಡೆಸಬೇಕು ಎಂದರು. ಈ ಚುನಾವಣೆ ಜನರ ಚುನಾವಣೆ ಆಗಬೇಕು ಎಂದು ಪ್ರಿಯಾಂಕಾ ಗಾಂಧಿ ಪುನರುಚ್ಛರಿಸಿದರು.