ನವದೆಹಲಿ: ಕೇಂದ್ರ ಚುನಾವಣಾ ಆಯೋಗದಲ್ಲಿ (Election Commission) ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು ಇವಿಎಂ (EVM) ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಬಿಜೆಪಿ ದೂರು ನೀಡಿದೆ. ಬಿಜೆಪಿ ಹಿರಿಯ ನಾಯಕ ಹರ್ದೀಪ್ ಸಿಂಗ್ ಪುರಿ (Hardeep Singh Puri) ನೇತೃತ್ವದ ನಿಯೋಗ ದೇಶ ವಿರೋಧಿ ಹೇಳಿಕೆ ಎಂದು ವ್ಯಾಖ್ಯಾನಿಸಿ ದೂರು ನೀಡಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಇಡಿ ಬಂಧನ ಖಂಡಿಸಿ ಭಾನುವಾರ ಇಂಡಿಯಾ ಒಕ್ಕೂಟ ದೆಹಲಿಯ ರಾಮಲೀಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಐಪಿಎಲ್ ನಡೆಯುವಂತೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ. ಪಂದ್ಯ ಆರಂಭಕ್ಕೂ ಮುನ್ನ ನಮ್ಮ ಆಟಗಾರರನ್ನು ಬಂಧಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.ಸದ್ಯ ಈ ಹೇಳಿಕೆ ವಿರುದ್ಧ ಬಿಜೆಪಿ ದೂರು ನೀಡಿದ್ದು,
ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ಹರ್ದೀಪ್ ಸಿಂಗ್ ಪುರಿ, ರಾಹುಲ್ ಗಾಂಧಿ ಅವರು ಗಂಭೀರವಾದ ಪರಿಣಾಮಗಳೊಂದಿಗೆ ಆಕ್ಷೇಪಾರ್ಹವಾದ ಹಲವಾರು ವಿಷಯಗಳನ್ನು ಹೇಳಿದ್ದಾರೆ. ಸಂವಿಧಾನ ಬದಲಾಯಿಸುವುದಾಗಿ ಯಾವ ಕಾರ್ಯಕರ್ತ ಹೇಳಿದ್ದಾರೋ ನಮಗೆ ಗೊತ್ತಿಲ್ಲ. ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ಚಿತ್ರವನ್ನು ಎಕ್ಸ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ಅತ್ಯಾಚಾರಿಗಳನ್ನು ರಕ್ಷಿಸಲು ಪ್ರಾಣ ಕೊಡುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.