ಬೆಂಗಳೂರು: ಲೋಕಸಭೆ ಚುನಾವಣೆಗೆ ಮೂರು ಪಕ್ಷಗಳು ರಂಗ ತಾಲೀಮು ಆರಂಭಿಸಿದೆ.ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲು ಕಾಂಗ್ರೆಸ್ ತನ್ನದೇ ಆದ ಗ್ಯಾರಂಟಿ ರಣತಂತ್ರ ಮೊರೆ ಹೋಗಿದೆ. ಇತ್ತ ಬಿಜೆಪಿ-ಜೆಡಿಎಸ್ ಹೊಸ ಮಾಡೆಲ್ ಜಾರಿ ಮಾಡಲು ಚಿಂತಿಸಿದೆ. ಕೆಲ ಕ್ಷೇತ್ರಗಳಲ್ಲಿ ಚಿಹ್ನೆ ಬದಲಿಸಿ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ದೆಹಲಿ ನಾಯಕರು ತೀ್ರ್ಮಾನ ಮಾಡಿದ್ದಾರೆ ಎನ್ನಲಾಗಿದೆ.
ಯೆಸ್,ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳನ್ನೂ ಗೆಲ್ಲುವ ಮೂಲಕ ,ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರಮಟ್ಟದಲ್ಲಿ ಮುಖಭಂಗ ಮಾಡಲು ಬಿಜೆಪಿ-ಜೆಡಿಎಸ್ ಭರ್ಜರಿ ರಣತಂತ್ರ ನಡೆಸಿದೆ. ಈ ಹಿನ್ನಲೆಯಲ್ಲಿ ಅಳೆದು ತೂಗಿ ಅಭ್ಯರ್ಥಿ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆ ಇಡುತ್ತಿದೆ.
ಕೆಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಪೂರಕವಾದ ವಾತವರಣ ಇದ್ರೆ,ಹಾಲಿ ಸಂಸದರಿಗೆ ಆಡಳಿತ ವಿರೋಧಿ ಅಲೆ ಇದೆ.ಹೀಗಾಗಿ,ಆಡಳಿತ ವಿರೋಧಿ ಅಲೆ ಇರುವ,ಹಾಲಿ ಸಂಸದರ ಕ್ಷೇತ್ರದಲ್ಲಿ ಹೊಸ ಮಾಡೆಲ್ ಜಾರಿ ಮಾಡಲು ದೆಹಲಿ ನಾಯಕರು ತೀರ್ಮಾನ ಮಾಡಿದ್ದಾರೆ. ಚಿಹ್ನೆ ಬದಲಿಸಿ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಚಿಂತಿಸಿದ್ದಾರೆ ಎನ್ನಲಾಗಿದೆ.