ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ ಸೋಲಿಗೆ ಒಂದೊಂದೇ ಕಾರಣ ಹುಡುಕುವಲ್ಲಿ ಬಿಜೆಪಿ ಮಗ್ನವಾಗಿದೆ. ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿರುವ ಬಿಜೆಪಿಗೆ ಪ್ರಮುಖ ಕಾರಣವಾಗಿ ತಿಳಿದುಬಂದಿದ್ದೇನೆಂದರೆ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ. ಇದುವೇ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ.
ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದ ಬಿಜೆಪಿಗೆ ಚುನಾವಣೆಯಲ್ಲಿ ಬಿಸಿ ತುಪ್ಪುವಾಯಿತು. ಅಲ್ಲದೆ, ಉಸ್ತುವಾರಿ ಸಚಿವರು ಜಿಲ್ಲೆಗಳಿಂದ ನಿಖರ ಮಾಹಿತಿ ತೆಗೆಯುವಲ್ಲಿ ವಿಫಲರಾಗಿದ್ದಲ್ಲದೆ, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಆಸಕ್ತಿ ತೋರಿಸದೇ ಇದ್ದಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ತಿಳಿದುಬಂದಿದೆ.