ಮಂಡ್ಯ:- ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಂಜೂರಾಗಿದ್ದ ಮನೆಗಳನ್ನು ಬಿಜೆಪಿ ಸರ್ಕಾರ ಯಾರಿಗೂ ಕೊಟ್ಟಿಲ್ಲ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,2017 ರಿಂದ 19ರಲ್ಲಿ ಮಂಜೂರಾತಿ ಆದ ಮನೆಗಳನ್ನು ಯಾರಿಗೂ ಕೊಟ್ಟಿಲ್ಲ.
ಒಂದು ವೇಳೆ ಬಿಜೆಪಿ ಮನೆ ನೀಡಿರುವುದಾಗಿ ಹೇಳಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದರು.
ಯಾವಾಗ ಹಿಂದಿನ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಇರುವಾಗ ಸಲ್ಮಂ ಬೋರ್ಡ್ ಅಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಗಿತ್ತು. ಅದೇ ರೀತಿಯಾಗಿ ರಾಜೀವ್ ಗಾಂಧಿ ಯೋಜನೆಯಲ್ಲಿ 53 ಸಾವಿರ ಮನೆಗಳು ಆ ಸಮಯದಲ್ಲೇ ಮಂಜೂರಾಗಿದ್ದವು. ಆದಾದ ಬಳಿಕ ಒಂದು ಮನೆಯನ್ನು ಸಹ ಮಂಜೂರು ಮಾಡಿಲ್ಲ. ಬಿಜೆಪಿ ಸರ್ಕಾರ ಒಂದು ಮನೆಯನ್ನು ಮಂಜೂರು ಮಾಡಿಲ್ಲ, ಒಂದು ಮನೆಯನ್ನು ಕೊಡುವುದಕ್ಕೆ ಸಾಧ್ಯವಾಗಿಲ್ಲ. ಒಂದು ವೇಳೆ ಅವರು ಮನೆ ನೀಡಿರುವುದಾಗಿ ಹೇಳಿದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದು ಹೇಳಿಕೆ ನೀಡಿದ್ದಾರೆ.