ಹುಬ್ಬಳ್ಳಿ: ಮುಡಾ ವಿಚಾರದಲ್ಲಿ ಬಿಜೆಪಿ ಅನವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ಪ್ರಧಾನಿ ಅಂಥವರು ವಿವಿಧ ರಾಜ್ಯಗಳ ಚುನಾವಣಾ ರ್ಯಾಲಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ.
ನಮಗೂ ಸಹ ಇವರ ರೀತಿ ರಾಜಕಾರಣ ಮಾಡಲು ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹರಿಹಾಯ್ದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತನಿಖೆ ನಡೆಯುತ್ತಿದೆ.
ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿಯವರು ಈ ವಿಷಯವನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸುತ್ತಾರೆ. ಇದು ರಾಜಕಾರಣ ಅಲ್ಲದೇ ಮತ್ತಿನ್ನೇನು. ನಮಗೂ ರಾಜಕಾರಣ ಮಾಡಲು ಬರುತ್ತದೆ. ನಮ್ಮ ಕಾಂಗ್ರೆಸ್ ಸರ್ಕಾರ ಅದಕ್ಕೆ ಸಮರ್ಥ ಉತ್ತರ ಕೊಡುತ್ತದೆ ಎಂದು ಕುಟುಕಿದರು.
ನಾವು ಯಾರ ಮೇಲೂ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಮುಡಾ ವಿಚಾರವಾಗಿ ಈಗಾಗಲೇ ತನಿಖೆ ನಡೆದಿದೆ. ಪ್ರತಿ ಪಕ್ಷದವರು ಸರ್ಕಾರಕ್ಕೆ ಸಲಹೆ, ಸೂಚನೆ ಕೊಡಬೇಕು. ಅದನ್ನು ಮೀರಿ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದರು.
ಸೈಟ್ ವಾಪಸ್ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ ಮೊದಲು ರಾಜೀನಾಮೆ ಕೊಡಲಿ. ಆ ನಂತರ ಉಳಿದವರ ರಾಜೀನಾಮೆ ಪ್ರಶ್ನೆ ಬರುತ್ತದೆ ಎಂದರು.
ಸ್ವಾಗತ; ಇದಕ್ಕೋ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಗೃಹ ಸಚಿವ ಜೀ ಪರಮೇಶ್ವರ ಅವರನ್ನ ಹೂ ಗುಚ್ಛ ನೀಡಿ ಸ್ವಾಗತ ಕೋರಿದರು. ನಂತರ ಪೊಲೀಸ್ ಗೌರವ ವಂದನೆ ಸ್ವೀಕಾರ ಮಾಡಿದ ಅವರು ಇದೇ ವೇಳೆ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿದರು. ಶಾಸಕ ಎಸ್.ಆರ್ ಪಾಟೀಲ್, ಅಬ್ಬಯ್ಯಾ ಪ್ರಸಾದ್, ಅಲ್ತಾಫ್ ಹಳ್ಳೂರು, ಸದಾನಂದ