ಬೆಂಗಳೂರು: ನನ್ನ ಹೇಳಿಕೆಯನ್ನೇ ಬಿಜೆಪಿಯವರು ಪ್ರಚಾರಕ್ಕೆ ಬಳಸಿದರೆ ಬಳಸಿಕೊಳ್ಳಲಿ.. ಸರ್ಕಾರ ನಡೆಸುವ ನಾವು ಇಂಥ ಘಟನೆ ಲಘುವಾಗಿ ಸ್ವೀಕರಿಸೋದಿಲ್ಲ ಎಂದು ಹೇಳಿದರು. ಆದರೆ ಇವರು ಬೇರೆ ಬೇರೆ ಅರ್ಥ ಕಲ್ಪಿಸೋದು ಸರಿಯಲ್ಲ, ಅವರು ಹೇಳಿದಕ್ಕೆ, ವ್ಯಾಖ್ಯಾನಕ್ಕೆ ಉತ್ತರ ಕೊಡಲು ಆಗಲ್ಲ ಎಂದು ಮಾಧ್ಯಮಗಳ ಎದುರು ಗೃಹ ಸಚಿವ ಜಿ.ಪರಮೇಶ್ವರ್ ಕಿಡಿ ಕಾರಿದರು.
ಹಾಗೆ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ಬಗ್ಗೆ ಮಾತನಾಡಿದ ಅವರು, ಸಿಎಲ್ ಪಿ ಸಭೆಯಲ್ಲಿ ಬಿ.ಆರ್.ಪಾಟೀಲ್ ರಾಜೀನಾಮೆ ಕೊಡುತ್ತೇನೆ ಎಂದಿದ್ದ ವಿಚಾರ ಸುಳ್ಳು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಕೆಲವು ಶಾಸಕರು ಸಿಎಂ ಗೆ ಪತ್ರ ಬರೆದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕೇಳಿಕೊಂಡಿದ್ರು.. ಹಿಂದಿನ ಶಾಸಕಾಂಗ ಪಕ್ಷದ ಸಭೆ ಅರ್ಧದಲ್ಲೇ ನಿಂತಿತ್ತು. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ನಿಂತಿತ್ತು, ಹಾಗಾಗಿ ಶಾಸಕರು ಪತ್ರ ಬರೆದಿದ್ದರು ಎಂದು ಹೇಳಿದರು. ಪತ್ರ ಬರೆಯೋದು ಅಷ್ಟೊಂದು ಸೂಕ್ತ ಅಲ್ಲ ಎಂದು ಸಿಎಂ ಶಾಸಕರಿಗೆ ಸೂಚಿಸಿದ್ದಾರೆ.