ಮೈಸೂರು: ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ. ಪಕ್ಷದ ಆಂತರಿಕ ಸರ್ವೆ ನಡೆಸಿ ಟಿಕೆಟ್ ಫೈನಲ್ ಮಾಡಿದ್ದಾರೆ. ಈ ಹಿಂದೆ ಗುಜರಾತ್ನಲ್ಲಿ ಮೊದಲ ಪ್ರಯೋಗ ಮಾಡಲಾಗಿತ್ತು.
ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕನಸು ನನಸಾಗಲಿದೆ. ಬಿಜೆಪಿ ಯಾರೋ ಒಬ್ಬರಿಗೇ ಸೀಮಿತವಾಗಿರುವ ಪಾರ್ಟಿ ಅಲ್ಲ, ಲಕ್ಷಾಂತರ ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದು ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.