ಬೆಂಗಳೂರು: ಮಾರ್ಚ್ 13, 14 ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ಅಷ್ಟರಲ್ಲಿ ನಾವು ಸರ್ಕಾರಿ ಕಾರ್ಯಕ್ರಮ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಂಗೇರಿಯ ಸೂಲಿಕೆರೆ ಗ್ರಾಮದ ಮೈದಾನದಲ್ಲಿ ನೂತನವಾಗಿ ಆಯ್ಕೆಯಾದ ಎಂಎಲ್ ಸಿ ಪುಟ್ಟಣ್ಣ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಟೈಮ್ ಇಲ್ಲ, ಕೇಂದ್ರ ಸರ್ಕಾರದವರು ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ ಎಂದರು.
ಪುಟ್ಟಣ್ಣ ಕರೆದಿದ್ದಕ್ಕೆ ಬಂದಿದ್ದಾರೆ, ಇದು ನಿಮ್ಮ ಗೆಲುವು ಪುಟ್ಟಣ್ಣ ಗೆಲುವು ಅಲ್ಲ. ಎರಡು ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಕ್ಕೆ ಸೋಲಿಸಿದ್ದೀರಿ. ಅದಕ್ಕೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇವೆ. ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.