ಪುಣೆ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಾಟ್ನಾದಲ್ಲಿ ಕಳೆದ ವಾರ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ‘ಪ್ರಧಾನಿ ಹುದ್ದೆ’ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರದ ಬಾರಾಮತಿ ಪಟ್ಟಣದಲ್ಲಿ ಪವಾರ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದುಬ್ಬರ, ನಿರುದ್ಯೋಗ ಮತ್ತು ಕೋಮುವಾದಿ ಶಕ್ತಿಗಳನ್ನು ನಿಯಂತ್ರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕುರಿತು ಚರ್ಚೆಗಳು ನಡೆದಿವೆ ಎಂದು ಹೇಳಿದರು.
ಪ್ರತಿಪಕ್ಷಗಳ ಸಭೆಯನ್ನು ಟೀಕಿಸಿದ್ದಕ್ಕಾಗಿ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿದರು. ಸಮಾವೇಶದ ಬಗ್ಗೆ ಬಿಜೆಪಿ ಏಕೆ ಚಿಂತಿಸುತ್ತಿದೆ ಎಂದ ಪವಾರ್, ಬಿಜೆಪಿಯವರಿಗೆ ರಾಜಕೀಯ ಪ್ರಬುದ್ಧತೆಯ ಕೊರತೆಯಿದೆ ಎಂದು ಹೇಳಿದ್ದಾರೆ.