ಕಾರ್ಮಿಕ ಮಹಿಳೆಯರಿಗೆ ಬಸ್ ಪಾಸ್ ವಿತರಣೆ ಮಾಡದ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬೊಮ್ಮಾಯಿ ಯಾವಾಗಲೂ ಫೂಲ್ ಮಾಡುವ ಕೆಲಸ ಮಾಡಿದ್ದಾರೆ. ಕೋಲಿ ಸಮುದಾಯಕ್ಕೆ ಎಸ್ಟಿ ಮೀಸಲಾತಿಯ ಭರವಸೆ ಕೊಟ್ಟಿದ್ರು. ಆದ್ರೆ ರಾಜ್ಯ ಸರ್ಕಾರ ಕೋಲಿ ಸಮುದಾಯಕ್ಕೆ ಅನ್ಯಾಯ ಮಾಡಿದೆ.
ಲಿಂಗಾಯತರು, ಒಕ್ಕಲಿಗರು ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿದ್ದೆವು. ಅಲ್ಪಸಂಖ್ಯಾತರ ಮೀಸಲಾತಿ ತೆಗೆದು 2% ಹೆಚ್ಚಳ ಮಾಡಿದ್ದಾರೆ. ನಮಗೆ ಬೇರೆಯವರ ಮೀಸಲಾತಿ ಬೇಡ. ಬಿಜೆಪಿಗೆ ಬೆಂಬಲ ಕೊಟ್ಟ ಸಮುದಾಯ ದಂಗೆ ಏಳುತ್ತಿದೆ. ಬಿಜೆಪಿ ನಾಯಕರು ಎಲ್ಲರಿಗೂ ಏಪ್ರಿಲ್ ಫೂಲ್ ಮಾಡುತ್ತಿದ್ದಾರೆ ಎಂದರು.