ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಪ್ರಧಾನಿ ಮೋದಿ ಇಂದು ( ಮೇ 1) ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಹೌದು, ಈಗಾಗಲೇ ಪರಿಣತರ ತಂಡವೊಂದು ಪ್ರಣಾಳಿಕೆಗೆ ಅಂತಿಮ ರೂಪವನ್ನು ನೀಡುತ್ತಿದ್ದು, ಹೈಕಮಾಂಡ್ ನ ಒಪ್ಪಿಗೆ ಸಿಕ್ಕ ಬಳಿಕ, ಬಿಜೆಪಿ ನಾಯಕರುಗಳು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದ್ದು, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕಕ್ಕೆ ವಿಶೇಷ ಯೋಜನೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಪ್ರಣಾಳಿಕೆಗೆ ಸಂಬಂಧಪಟ್ಟಂತೆ ಮುಂದಿನ ಐದು ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಯಾವ ರೀತಿಯಲ್ಲಿ ಕೆಲಸ ಮಾಡಲಾಗುವುದು ಸೇರಿದಂತೆ ಜನ ಪರ ಕೆಲಸಗಳನ್ನು ಮಾಡುವ ನಿಟ್ಟಿನಲ್ಲಿ ಬೇಕಾಗಿರುವ ಮಾಹಿತಿಯನ್ನು ಈಗಾಗಲೇ ಸಂಗ್ರಹ ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ಪ್ರಣಾಳಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ಮಾಜಿ ಸಿಎಂ ಬಿಎಸ್ವೈ ಅವರೊಂದಿಗೆ ಪ್ರಣಾಳಿಕೆ ರಚನ ತಂಡದವರು ಚರ್ಚೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ. ಇನ್ನೂ ಎಲ್ಲವನ್ನು ಅಂದುಕೊಂಡತೇ ಆದರೆ ಇದೇ ಮೇ ಒಂದರಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.