ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂದ ಪಟ್ಟಂತೆ ವಿಧಾನ ಸಭೆಯಲ್ಲಿ ಆಹೋರಾತ್ರಿ ಧರಣಿ ನಡೆಯುತ್ತಿದೆ ಮೂಡಾ ಹಗರಣವನ್ನು ಸಾರ್ವಜನರ ಗಮನಕ್ಕೆ ತರಲಿಕ್ಕೆ ಅವಕಾಶ ಕೊಡದೆ ಇದ್ದ ಕಾರಣಕ್ಕೆ ಸಿದ್ದರಾಮಯ್ಯ ಇರುವುದು ಮೈಸೂರಿನಲ್ಲಿ ಹಾಗಾಗಿ ಬೆಂಗಳೂರು ಟು ಮೈಸೂರು 6 ದಿನಗಳ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಹೀಗಾಗಿ ಸೋಮವಾರ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪಾದಯಾತ್ರೆ ನಡೆಸಲು ಪ್ಲ್ಯಾನ್ ಮಾಡಿದ್ದಾರೆ.
ಎರಡು ಆಯ್ಕೆ ಇಟ್ಟುಕೊಂಡಿರುವ ಬಿಜೆಪಿ, ಒಂದೋ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ.
ಬಿಜೆಪಿಯ ಪಾದಯಾತ್ರೆ ಪ್ಲ್ಯಾನ್ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರೋಧಿಸಿದಂತೆ ಮಾತನಾಡಿದ್ದಾರೆ. ಬಿಜೆಪಿಯವರ ಪಾದಯಾತ್ರೆ ನಾಟಕ, ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದಿದ್ದಾರೆ. ಬಿಜೆಪಿಯವರು ಪಾದಯಾತ್ರೆ ಮಾಡಲಿ, ದೆಹಲಿ ತನಕ ನಡೆದುಕೊಂಡು ಹೋಗಲಿ, ವಾತಾವರಣ ಚೆನ್ನಾಗಿದೆ ಎಂದು ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು ಕೌಂಟರ್ ಆಗಿ ಪಾದಯಾತ್ರೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಬಿಜೆಪಿ ಕಾಲದ ಹಗರಣಗಳನ್ನ ಮುಂದಿಟ್ಟು, ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಲು ಮೈಸೂರು ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡ್ತಿದ್ದಾರೆ. ಇದರ ಜೊತೆಗೆ ಮೈಸೂರಿನಲ್ಲಿ ಸಮಾವೇಶ ನಡೆಸುವ ಚಿಂತನೆಯೂ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಅನೌಪಚಾರಿಕ ಮಾತುಕತೆಯೂ ನಡೆದಿದೆ.