ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಹಾಗೂ ಪ್ರವಾಹ ನಿರ್ವಹಣೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಬೇಕಾದ ಸರ್ವ ಪಕ್ಷಗಳ ಸಭೆಗೆ ಬಿಜೆಪಿ ಶಾಸಕರು ಬಹಿಷ್ಕಾರ ಹಾಕಿದ್ದಾರೆ.
ಆದರೆ 11 ಗಂಟೆಗೆ ಶುರುವಾಗಬೇಕಾದ ಸಭೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಒಂದು ಗಂಟೆ ತಡವಾಗಿ ಆಗಮಿಸಿದರು. ಇದರಿಂದ ಅಸಮಾಧಾನಗೊಂಡ ಮಾಜಿ ಸಚಿವರು ಹಾಗೂ ಶಾಸಕರು ಡಿಸಿಎಂ ನಡವಳಿಕೆ ಸಿಟ್ಟಾಗಿ ಸಭೆ ಆರಂಭಕ್ಕೂ ಮೊದಲೇ ಹೊರನಡೆದರು.
ಸಭೆ ವಿಳಂಬ ಕಾರಣಕ್ಕಾಗಿ ಸಭೆ ಆರಂಭಕ್ಕೂ ಮೊದಲು ಹೊರ ನಡೆದ ಬಿಜೆಪಿ ಶಾಸಕರ ಮನವೊಲಿಕೆ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಯತ್ನಿಸಿದರು. ವಿಧಾನಸೌಧ ಕಾರಿಡಾರ್ನಲ್ಲಿ ಏ ಸೋಮಣ್ಣ, ಏ ಮುನಿ ಬಾ, ಬಾ ಎಂದು ಕರೆದುಕೊಂಡು ಅವರ ಹಿಂದೆಯೇ ಹೋಗಿ ನಿಂತುಕೊಳ್ಳುವಂತೆ ಕರೆದರು. ಆದರೆ ಶಾಸಕರು ಹೊರ ನಡೆದರು. ಸಭೆಯಿಂದ ಹೊರ ನಡೆಯುತ್ತಿದ್ದ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಭೆಗೆ ಆಗಮಿಸಿದರು.
ಬೆಂಗಳೂರು ಸಮಗ್ರ ಅಭಿವೃದ್ಧಿ ಸಂಬಂಧ ಸಮಾಲೋಚನೆ ನಡೆಸಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಬೆಂಗಳೂರು ನಗರದ ಎಲ್ಲ ಶಾಸಕರು, ಸಂಸದರು, ಎಂಎಲ್ಸಿಗಳ ಸಭೆಯಲ್ಲಿ ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್, ಸಂಸದರಾದ ಡಿ ಕೆ ಸುರೇಶ್, ತೇಜಸ್ವಿ ಸೂರ್ಯ, ಪಿ ಸಿ ಮೋಹನ್, ರಾಜ್ಯಸಭೆ ಸದಸ್ಯರಾದ ಜಿ ಸಿ ಚಂದ್ರಶೇಖರ್, ಶಾಸಕರಾದ ರಿಜ್ವಾನ್ ಅರ್ಶದ್, ಎ ಸಿ ಶ್ರೀನಿವಾಸ್, ಎ ಕೃಷ್ಣಪ್ಪ, ರವಿ ಸುಬ್ರಮಣ್ಯ, ಟಿ ಎ ಶರವಣ, ಗೋಪಾಲಯ್ಯ, ಗರುಡಾಚಾರ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು. ಪ್ರವಾಹ ತಡೆಯುವ ಬಗ್ಗೆ, ತುರ್ತು ಕ್ರಮಗಳ ಅಗತ್ಯಗಳ ಬಗ್ಗೆ ಚರ್ಚಿಸಿದರು